Sunday, January 19, 2025
Sunday, January 19, 2025

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ

ಪ್ರವೀಣ್ ನೆಟ್ಟಾರು ಹತ್ಯೆ ಆರೋಪಿಗಳ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ

Date:

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾಗಿಯಾಗಿ, ತಲೆಮರೆಸಿಕೊಂಡಿರುವ ಆರೋಪಿಗಳ ಪತ್ತೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್.ಐ.ಎ) ಬಲೆ ಬೀಸಿದೆ. ತಲೆಮರೆಸಿಕೊಂಡ ಆರೋಪಿಗಳ ಸುಳಿವು ನೀಡಿದವರಿಗೆ 5 ಲಕ್ಷ ರೂ. ಬಹುಮಾನ ನೀಡುವುದಾಗಿ (ಎನ್.ಐ.ಎ) ಘೋಷಿಸಿದೆ. ಸುಳ್ಯದ ಬೆಳ್ಳಾರೆಯಲ್ಲಿ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಕೊಲೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದರು.

ಪ್ರಮುಖ ಆರೋಪಿಗಳಾದ ಬೆಳ್ಳಾರೆಯ ಮಹಮ್ಮದ್ ಮುಸ್ತಾಫಾ ಮತ್ತು ಮಡಿಕೇರಿಯ ತುಫೈಲ್ ಬಗ್ಗೆ ಸುಳಿವು ನೀಡಿದರೆ ತಲಾ 5 ಲಕ್ಷ ರೂ. ಬಹುಮಾನವನ್ನು (ಎನ್.ಐ.ಎ) ಘೋಷಿಸಿದೆ. ಕೊಲೆಗೆ ಸಹಕಾರ ನೀಡಿದ ಸುಳ್ಯದ ಉಮ್ಮರ್ ಫಾರೂಕ್ ಹಾಗೂ ಬೆಳ್ಳಾರೆಯ ಅಬೂಬಕ್ಕರ್ ಸಿದ್ದಿಕ್ ‌ಬಗ್ಗೆ ಮಾಹಿತಿ ನೀಡಿದರೆ ತಲಾ 2 ಲಕ್ಷ ಬಹುಮಾನವನ್ನು ಎನ್‌ಐಎ ಘೋಷಿಸಿದೆ. ಆರೋಪಿಗಳ ಬಗ್ಗೆ ಮಾಹಿತಿ ನೀಡುವವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಎನ್‌ಐಎ ತಿಳಿಸಿದೆ.

ವಿಳಾಸ- ಪೊಲೀಸ್ ಅಧೀಕ್ಷಕರು, ರಾಷ್ಟ್ರೀಯ ತನಿಖಾ ದಳ (ಎನ್​ಐಎ), 8ನೇ ಮಹಡಿ, ಸರ್. ಎಂ ವಿಶ್ವೇಶ್ವರಯ್ಯ ಕೇಂದ್ರೀಯ ಸದನ, ದೊಮ್ಮಲೂರು, ಬೆಂಗಳೂರು 560071. ಮಾಹಿತಿ ನೀಡುವವರು ಇ-ಮೇಲ್ [email protected], ದೂರವಾಣಿ ಸಂಖ್ಯೆ 080-29510900/8904241100

1 COMMENT

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!