ಬೆಂಗಳೂರು: ನವೆಂಬರ್ 18 ಅಥವಾ 20 ರಂದು ಪಂಚರತ್ನ ರಥಯಾತ್ರೆಯ ಆರಂಭ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕೋಲಾರದಲ್ಲಿ ಜೆಡಿಎಸ್ ಪಕ್ಷಕ್ಕೆ ಸಮರ್ಥ ಅಭ್ಯರ್ಥಿಗಳಿದ್ದಾರೆ.
ಸಿದ್ದರಾಮಯ್ಯ ಮಾತ್ರ ಅಲ್ಲ, ಯಾರೇ ನಿಂತರೂ ನಮ್ಮ ಪಕ್ಷದ ಮೇಲೆ ಯಾವುದೇ ಪರಿಣಾಮ ಇಲ್ಲ. ಬಿಜೆಪಿಯ ಎಲ್ಲಾ ನಿರ್ಧಾರಗಳು ದೆಹಲಿಯಲ್ಲಿ ಆಗುತ್ತಿವೆ. ಇದನ್ನು ಜನರು ಅರ್ಥ ಮಾಡಿಕೊಳ್ಳಬೇಕು. ರಾಜ್ಯ ಘಟಕಕ್ಕೆ ಯಾವುದೇ ನಿರ್ಧಾರ ಕೈಗೊಳ್ಳುವ ಅಧಿಕಾರವಿಲ್ಲ. ಡಬಲ್ ಇಂಜಿನ್ ಸರ್ಕಾರ ಜನವಿರೋಧಿ ನೀತಿಯಿಂದ ಹೆಚ್ಚು ಸಮಯ ಉಳಿಯಲ್ಲ ಎಂದರು.