ಬೆಂಗಳೂರು: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿಯವರ ಸ್ಮರಣಾರ್ಥವಾಗಿ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ, ಐಟಿ-ಬಿಟಿ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಗಳಲ್ಲಿ ಡಿ.1ರಿಂದ ‘ಸುಶಾಸನ ಮಾಸ’ವನ್ನು ಆಚರಿಸಲಾಗುವುದು ಎಂದು ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಕೌಶಲಾಭಿವೃದ್ಧಿ ಇಲಾಖೆಯ ಮೂಲಕ ಹತ್ತು ಸಾವಿರ ಜನರಿಗೆ ವಿವಿಧ ಸಂಸ್ಥೆಗಳಲ್ಲಿ ಉದ್ಯೋಗ ಕೊಡಿಸುವ ಸಂಬಂಧ ನೇಮಕಾತಿ ಪತ್ರಗಳನ್ನು ನೀಡಲಾಗುವುದು ಎಂದು ಸಚಿವ ಅಶ್ವತ್ಥನಾರಾಯಣ ಸಭೆಯಲ್ಲಿ ತಿಳಿಸಿದರು.
ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ ತಿಮ್ಮೇಗೌಡ, ಐಟಿಬಿಟಿ ಇಲಾಖೆ ಹೆಚ್ವುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ, ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಐಟಿಬಿಟಿ ನಿರ್ದೇಶಕಿ ಮೀನಾ ನಾಗರಾಜ, ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತೆ ಜ್ಯೋತಿ, ಕಿಯೋನಿಕ್ಸ್ ವ್ಯವಸ್ಥಾಪಕ ನಿರ್ದೇಶಕ ರವಿ ಡಿ.ಚನ್ನಣ್ಣನವರ್ ಮುಂತಾದವರು ಉಪಸ್ಥಿತರಿದ್ದರು.