Sunday, November 24, 2024
Sunday, November 24, 2024

ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಕಾರ್ಮಿಕರ ಮಕ್ಕಳ ಶೈಕ್ಷಣಿಕ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

Date:

ಬೆಂಗಳೂರು: ಸಂಘಟಿತ ಕಾರ್ಮಿಕರ ಮಕ್ಕಳಿಂದ ಪ್ರೌಢಶಾಲೆಯಿಂದ ಸ್ನಾತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ, ಇಂಜಿನೀಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ 2022-23ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಆನ್‍ಲೈನ್ ಮುಖಾಂತರ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸುವುದು ಹೇಗೆ?

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ವೆಬ್‍ಸೈಟ್‍ನಲ್ಲಿ http://www.klwbapps.karnataka.gov.in ಡಿಸೆಂಬರ್ 31 ಒಳಗೆ ಅರ್ಜಿ ಸಲ್ಲಿಸಬೇಕು. ಕಾರ್ಮಿಕರ ಮಾಸಿಕ ವೇತನ ರೂ.35,000/- ಗಿಂತ ಮೀರಿರಬಾರದು. ಒಂದು ಕುಟುಂಬದಲ್ಲಿ ಒಬ್ಬ ವಿದ್ಯಾರ್ಥಿಗೆ ಮಾತ್ರ ಈ ಸೌಲಭ್ಯ ನೀಡಲಾಗುವುದು. ವಿದ್ಯಾರ್ಥಿಯು ಹಿಂದಿನ ವರ್ಷದಲ್ಲಿ ಸಾಮಾನ್ಯ ವರ್ಗ ಶೇ.50, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರಿಗೆ ಶೇ.45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿ, ಕಾರ್ಮಿಕ ಕಲ್ಯಾಣ ಭವನ, ನಂ.48, 1ನೇ ಹಾಗೂ 2ನೇ ಮಹಡಿ, ಮತ್ತೀಕೆರೆ ಮುಖ್ಯರಸ್ತೆ, ಯಶವಂತಪುರ, ಬೆಂಗಳೂರು-560022 ಇಲ್ಲಿ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 080-23475188, 8277291175, 8277120505, 9141585402, 9141602560 ಮೂಲಕ ಸಂಪರ್ಕಿಸಬಹುದೆಂದು ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಕಲ್ಯಾಣ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!