ರಾಯಚೂರು: ಹೆರಿಗೆ ಮಾಡಿಸಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರನ್ನು ಅಮಾನತುಗೊಳಿಸಲಾಗಿದೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕು ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲು ಐದು ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ನರ್ಸ್ ಗಳನ್ನು ಡಿ.ಹೆಚ್.ಓ ಅಮಾನತುಗೊಳಿಸಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಪ್ರಕರಣ ಗಂಭೀರ ಸ್ವರೂಪ ಪಡೆದಿತ್ತು.
ಸೋಷಿಯಲ್ ಮೀಡಿಯಾಗಳಲ್ಲಿ ನರ್ಸ್ ಗಳು ಲಂಚವನ್ನು ಪಡೆಯುತ್ತಿರುವಂತ ವೀಡಿಯೋ ವೈರಲ್ ಆದ ಬೆನ್ನಲ್ಲೇ ರಾಯಚೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುರೇಂದ್ರ ಬಾಬು, ಇಬ್ಬರು ನರ್ಸ್ ಗಳನ್ನು ಅಮಾನುತುಗೊಳಿಸಿದ್ದಾರೆ.