ಬೆಂಗಳೂರು: ಇಂದು ಬೆಂಗಳೂರಿನಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯದಲ್ಲಿ ಭಿಕ್ಷಾಟನೆ ನಿರ್ಮೂಲನೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಸಂಪೂರ್ಣವಾಗಿ ರಕ್ಷಿಸಿ ಹಂತ ಹಂತವಾಗಿ ಭಿಕ್ಷಾಟನೆ ನಿರ್ಮೂಲನೆ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಉಚ್ಚ ನ್ಯಾಯಾಲಯದ ಆದೇಶದಂತೆ ಮಾನಸಿಕ ಅಸ್ವಸ್ಥ ನಿರಾಶ್ರಿತರ ಪುನರ್ವಸತಿಗಾಗಿ ಅಲ್ಪಾವಧಿ ಮತ್ತು ದೀರ್ಘಾವಧಿ ಪುನರ್ವಸತಿ ಕಲ್ಪಿಸಲು ಮೂಲಭೂತ ಸೌಕರ್ಯಗಳಿಗೆ ಅನುದಾನ ಬಿಡುಗಡೆಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.