Monday, November 25, 2024
Monday, November 25, 2024

ಸೌತ್ ಈಸ್ಟ್ ಇಂಡಿಯಾ ವಲಯ ಯುವಜನ ಮೇಳ: ಆಳ್ವಾಸ್ ವಿದ್ಯಾರ್ಥಿಗಳ ಪಾರಮ್ಯ

ಸೌತ್ ಈಸ್ಟ್ ಇಂಡಿಯಾ ವಲಯ ಯುವಜನ ಮೇಳ: ಆಳ್ವಾಸ್ ವಿದ್ಯಾರ್ಥಿಗಳ ಪಾರಮ್ಯ

Date:

ಮೂಡುಬಿದಿರೆ, ಫೆ.2:  ಕಲಬುರಗಿಯ ಗುಲಬರ್ಗಾ ವಿಶ್ವವಿದ್ಯಾಲಯ ಹಾಗೂ ನವದೆಹಲಿ ಅಸೋಸಿಯೇಷನ್ ಆಫ್ ಇಂಡಿಯನ್ ಯುನಿವರ್ಸಿಟಿ ಆಶ್ರಯದಲ್ಲಿ ನಡೆದ ೩೬ನೇ ಅಂತರ್ ವಿಶ್ವವಿದ್ಯಾಲಯ ಸೌತ್ ಈಸ್ಟ್ ಇಂಡಿಯಾ ವಲಯ ಯುವಜನ ಮೇಳದ ಏಕಾಂಕ ನಾಟಕ ಪ್ರಥಮ ಹಾಗೂ ಜಾನಪದ ನೃತ್ಯದಲ್ಲಿ ದ್ವಿತೀಯ ಸ್ಥಾನ ಪಡೆದ ಆಳ್ವಾಸ್ ಕಾಲೇಜು ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದೆ. ಆಳ್ವಾಸ್ ಕಾಲೇಜು ತಂಡವು ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಿತ್ತು.

ಆಳ್ವಾಸ್ ರಂಗ ಅಧ್ಯಯನ ಕೇಂದ್ರದ ನಿರ್ದೇಶಕ ಜೀವನರಾಮ್ ಸುಳ್ಯ ಮಾರ್ಗದರ್ಶನದಲ್ಲಿ ಭುವನ್ ಮಣಿಪಾಲ್ ನಿರ್ದೇಶಿಸಿದ ಹಾಗೂ ಉಜ್ವಲ್ ಯುವಿ ವಿನ್ಯಾಸ ಮಾಡಿದ ‘ದುರ್ಯೋಧ’ ನಾಟಕ ಪ್ರಥಮ ಬಹುಮಾನ ಪಡೆಯಿತು. ಸುರೇಶ್ ಕುಮಾರ್ ನಿರ್ದೇಶನದ ಜಾನಪದ ನೃತ್ಯವು ದ್ವಿತೀಯ ಸ್ಥಾನ ಪಡೆಯಿತು. ಸಾಂಸ್ಕೃತಿಕ ಪ್ರತಿಭೆಗಳಿಗೆ ದತ್ತು ಯೋಜನೆ ಅಡಿಯಲ್ಲಿ ಉಚಿತ ಶಿಕ್ಷಣ ನೀಡುತ್ತಿರುವ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ ಮೋಹನ್ ಆಳ್ವ ವಿಜೇತರನ್ನು ಅಭಿನಂದಿಸಿದರು. ಆಳ್ವಾಸ್ ರಂಗ ಅಧ್ಯಯನ ಕೇಂದ್ರವು 11 ಬಾರಿ ರಾಷ್ಟ್ರೀಯ ರಂಗ ಪುರಸ್ಕಾರಕ್ಕೆ ಪಾತ್ರವಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜನಾರ್ದ​ನ್ ಕೊಡವೂರು​ ದಂಪತಿಗಳಿಗೆ ಅಭಿನಂದನೆ ​

ಉಡುಪಿ, ನ.24: ಭಾರ​ತ್ ಸ್ಕೌಟ್ಸ್ ಅಂಡ್ ಗೈಡ್ಸ್ ​ಉಡುಪಿ ಸಂಸ್ಥೆಯ ಜಿಲ್ಲಾ​...

ಶಿಸ್ತು, ಛಲ, ಆತ್ಮಸ್ಥೈರ್ಯ ಬೆಳೆಸಿಕೊಳ್ಳಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ನ.24: ಸ್ಕೌಟ್ಸ್ ಮತ್ತು ಗೈಡ್ಸ್ ನಲ್ಲಿ ಭಾಗವಹಿಸುವುದರಿಂದ ಜೀವನದಲ್ಲಿ ಶಿಸ್ತು,...

ತುಳು ಭಾವಗೀತೆ ಸ್ಪರ್ಧೆ

ಉಡುಪಿ, ನ.24: ತುಳುಕೂಟ ಉಡುಪಿ (ರಿ,) ವತಿಯಿಂದ ದಿ. ನಿಟ್ಟೂರು ಸಂಜೀವ...

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...
error: Content is protected !!