ಬೆಂಗಳೂರು: ಮುಕ್ತ ವಿಶ್ವವಿದ್ಯಾಲಯಗಳಲ್ಲಿ ಅಧ್ಯಯನ ಮಾಡಿದವರಿಗೆ ಉದ್ಯೋಗ ನೇಮಕಾತಿಯಲ್ಲಿ ಯಾವುದೇ ತಾರತಮ್ಯಕ್ಕೆ ಅವಕಾಶ ನೀಡದಂತೆ ನಿಗಾ ವಹಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಇಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ಏರ್ಪಡಿಸಿದ್ದ ಅಖಿಲ ಭಾರತ ಮುಕ್ತ ವಿವಿಗಳ ಕುಲಪತಿಗಳ ಸಮಾವೇಶದಲ್ಲಿ ಕೋವಿಡ್-19 ಹಾಗೂ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಅಡಿ ಡಿಜಿಟಲ್ ಕಲಿಕೆ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
ಯುಜಿಸಿ ಮಾನ್ಯತೆ ಇರುವ ಮುಕ್ತ ವಿವಿಗಳ ಪದವಿಗಳು ಕೂಡ ಇತರೆ ವಿವಿಗಳ ಪದವಿಗಳಂತೆ ಎಲ್ಲ ರೀತಿಯ ಉದ್ಯೋಗಕ್ಕೂ ಅರ್ಹತೆ ಪಡೆಯಲಿವೆ ಎಂದು ಹೇಳಿದರು.