Home ಸುದ್ಧಿಗಳು ರಾಜ್ಯ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಕ್ರಾಸ್‌ ಕಂಟ್ರಿ ಚಾಂಪಿಯನ್‌ಶಿಪ್: ಆಳ್ವಾಸ್‌ ಓಟಗಾರರ ಸಾಧನೆ

ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಕ್ರಾಸ್‌ ಕಂಟ್ರಿ ಚಾಂಪಿಯನ್‌ಶಿಪ್: ಆಳ್ವಾಸ್‌ ಓಟಗಾರರ ಸಾಧನೆ

284
0

ವಿದ್ಯಾಗಿರಿ (ಮೂಡುಬಿದಿರೆ), ಫೆ. 13: ಬೆಂಗಳೂರಿನ ಪ್ರೆಸಿಡೆನ್ಸಿ ವಿಶ್ವವಿದ್ಯಾಲಯದಲ್ಲಿ ಭಾನುವಾರ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಕ್ರಾಸ್‌ಕಂಟ್ರಿ (ಗುಡ್ಡಗಾಡು) ಚಾಂಪಿಯನ್‌ಶಿಪ್‌ನ ಮಹಿಳೆಯರ ಹಾಗೂ ಪುರುಷರ ವಿಭಾಗದಲ್ಲಿ ಮಂಗಳೂರು ವಿಶ್ವವಿದ್ಯಾಲಯವು ಕ್ರಮವಾಗಿ ಚಾಂಪಿಯನ್ ಹಾಗೂ ರನ್ನರ್ ಅಪ್ ಸ್ಥಾನ ಪಡೆದಿದೆ.

ಎರಡೂ ವಿಭಾಗಗಳಲ್ಲಿ ಸ್ಪರ್ಧಿಸಿದ್ದ ಆರು ವಿದ್ಯಾರ್ಥಿಗಳ ಪೈಕಿ ತಲಾ ಐವರು ಆಳ್ವಾಸ್ ಕಾಲೇಜಿನ ಓಟಗಾರರು. ಮಹಿಳಾ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಪೂನಂ (ದ್ವಿತೀಯ) ಹಾಗೂ ಬಸಂತಿ (ಐದನೇ) ಸ್ಥಾನ ಪಡೆದಿದ್ದಾರೆ. ಪುರುಷರ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ಉಪೇಂದ್ರ ಬಲಿಯಾರ್ (ಪ್ರಥಮ) ಹಾಗೂ ಹರೀಶ್ (ತೃತೀಯ) ಸ್ಥಾನ ಪಡೆದಿದ್ದಾರೆ. ವಿಜೇತ ಕ್ರೀಡಾಪಟುಗಳನ್ನು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.