Monday, January 20, 2025
Monday, January 20, 2025

ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಉದ್ಘಾಟನೆ

ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಉದ್ಘಾಟನೆ

Date:

ಮಂಗಳೂರು, ಮಾ. 12: ನ್ಯಾಯವಾದಿ, ಕವಯತ್ರಿ, ಮಕ್ಕಳ ಸಾಹಿತಿ ಪರಿಮಳ ರಾವ್ ಕೆ. ಸಾರಥ್ಯದ
‘ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ’ದ ಉದ್ಘಾಟನೆಯ ಅಂಗವಾಗಿ ಕಥಾಲಾಪ ಮತ್ತು ಚಿಣ್ಣರ ಚಿಲಿಪಿಲಿ ಕಾರ್ಯಕ್ರಮ ಮಂಗಳೂರಿನ ಕದ್ರಿ ಬಾಲಭವನದಲ್ಲಿ ಭಾನುವಾರ ನಡೆಯಿತು.

ಕಾರ್ಯಕ್ರಮ ಉದ್ಘಾಟಿಸಿದ ಎನ್.ಎಸ್.ಸಿ.ಡಿ.ಎಫ್ ಅಧ್ಯಕ್ಷ ಗಂಗಾಧರ್ ಗಾಂಧಿ ಮಾತನಾಡಿ, ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಇಂದು ಅಧಿಕೃತವಾಗಿ ಅನಾವರಣಗೊಂಡಿದೆ. ದೇಶದಲ್ಲಿ ಲಕ್ಷಾಂತರ ಸ್ವಯಂ ಸೇವಾ ಸಂಸ್ಥೆಗಳು ಕರ್ತವ್ಯ ನಿರ್ವಹಿಸುತ್ತಿದೆ, ಸರಕಾರ ತಲುಪಲು ಸಾಧ್ಯವಾಗದ ಪ್ರದೇಶದಲ್ಲಿಯೂ ತನ್ನ ಕಾರ್ಯಚಟುವಟಿಕೆ ನಡೆಸುತ್ತಿದೆ. ಈ ಕಾರಣದಿಂದಾಗಿ ಭಾರತದ ಅನೇಕ ಹಳ್ಳಿ ಪ್ರದೇಶಗಳು ಅಭಿವೃದ್ಧಿಗೊಂಡಿವೆ. ಇದು ಸ್ವಯಂ ಸೇವಾ ಸಂಸ್ಥೆಯ ಕಾರ್ಯವೈಖರಿ ಎಂದ ಅವರು ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ ಪಾರದರ್ಶಕತ್ವವನ್ನು ಅನಾವರಣಗೊಳಿಸುತ್ತಾ ಸಮಾಜದ ಎಲ್ಲಾ ಸಮುದಾಯದ ಆಶಯಗಳಿಗೆ ಸ್ಪಂದಿಸುವಂತಾಗಬೇಕು. ಆಗಲೇ ‘ಅನಾವರಣ’ದ ಸಮಾಜಮುಖಿ ಕಾರ್ಯಗಳು ಈಡೇರಲು ಸಾಧ್ಯವೆಂದು ಹೇಳಿದರು.

ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಸ್ಥಾನ ಅಧ್ಯೆಕ್ಷೆ ನ್ಯಾಯವಾದಿ ಪರಿಮಳ ರಾವ್ ಕೆ. ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು. ಕೆ.ಎಸ್.ಎಸ್.ಎ.ಪಿ ಅಧ್ಯೆಕ್ಷೆ ರಾಣಿಪುಷ್ಪಲತಾದೇವಿ, ಕಥಾಲಾಪ ಅಧ್ಯಕ್ಷ ಮುಕ್ತಕ, ಗಜಲ್ ಕವಿ ಡಾ. ಸುರೇಶ್ ನೆಗಳಗುಲಿ, ಕಥಾಲಾಪ ಸಂಚಾಲಕಿ ಗೀತಾ ಲಕ್ಷ್ಮೀಶ ಉಪಸ್ಥಿತರಿದ್ದರು. ಆಶ್ವಿಜ ಶ್ರೀಧರ್ ಪ್ರಾರ್ಥನೆಗೈದರು, ಅನಾವರಣ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನದ ಅಧ್ಯೆಕ್ಷೆ ಪರಿಮಳ ರಾವ್ ಕೆ. ಸ್ವಾಗತಿಸಿ, ಪ್ರಾಸ್ತಾವನೆಗೈದರು. ರಶ್ಮಿ ಸನಿಲ್ ಕಾರ್ಯಕ್ರಮ ನಿರೂಪಿಸಿದರು.

ಕಥಾಲಾಪದಲ್ಲಿ ವ. ಉಮೇಶ್ ಕಾರಂತ್, ಅಶ್ವಿಜ ಶ್ರೀಧರ್, ಜಯರಾಮ ಪಡ್ರೆ, ರಾಮಾಂಜಿ ನಮ್ಮ ಭೂಮಿ, ಗೋಪಾಲಕೃಷ್ಣ ಶಾಸ್ತ್ರಿ, ರೇಖಾ ಸುದೇಶ್ ರಾವ್‌, ಶ್ಯಾಮಪ್ರಸಾದ್ ಭಟ್, ದೀಪಾ ಸದಾನಂದ್, ನವೀನ್ ಕುಮಾರ್ ಪೆರಾರ, ಮಾನ್ವಿ ಮಂಗಳೂರು, ಹಿತೇಶ್ ಕುಮಾರ್ ಎ, ಸುಗಂಧಿ ಶ್ಯಾಮ್, ಪದ್ಮನಾಭ ಮಿಜಾರು, ದೇವರಾಜ್ ಕುಂಬ್ಳೆ, ಚಿತ್ರಕಲಾ ದೇವರಾಜ್, ರೇಮಂಡ್ ಡಿಕೂನ ತಾಕೊಡೆ, ಅನುರಾಧಾ ರಾಜೀವ್, ಹರೀಶ್ ಮೆಲ್ಕಾರ್, ದಯಮಣಿ ಎಕ್ಕಾರ್, ವಾಣಿ ಲೋಕಯ್ಯ, ಸೌಮ್ಯ ಆರ್ ಶೆಟ್ಟಿ, ಎ. ಕೆ. ಕುಕ್ಕಿಲಾ ಕತೆಗಾರರು ತಮ್ಮ ಸ್ವರಚಿತ ಕತೆಗಳನ್ನು ವಾಚಿಸಿದರು. ಶಾಲಾ ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!