Home ಸುದ್ಧಿಗಳು ರಾಜ್ಯ ಉಡುಪಿ ಸಂಜೀವಿನಿ ಒಕ್ಕೂಟಕ್ಕೆ ಅತ್ಯುತ್ತಮ ಘನ ತ್ಯಾಜ್ಯ ನಿರ್ವಹಣೆ ಬಗ್ಗೆ ರಾಜ್ಯ ಪುರಸ್ಕಾರ

ಉಡುಪಿ ಸಂಜೀವಿನಿ ಒಕ್ಕೂಟಕ್ಕೆ ಅತ್ಯುತ್ತಮ ಘನ ತ್ಯಾಜ್ಯ ನಿರ್ವಹಣೆ ಬಗ್ಗೆ ರಾಜ್ಯ ಪುರಸ್ಕಾರ

642
0

ಬೆಂಗಳೂರು, ಮಾ. 13: ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಅಭಿಯಾನ- ಸಂಜೀವಿನಿ ಇವರ ವತಿಯಿಂದ ನಡೆದ ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳ ಪ್ರಶಸ್ತಿ ಪುರಸ್ಕಾರದಲ್ಲಿ ಉಡುಪಿ ಜಿಲ್ಲೆಯ 80 ಬಡಗಬೆಟ್ಟು, ನೇಸರ ಸಂಜೀವಿನಿ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟಕ್ಕೆ ಉತ್ತಮವಾಗಿ ಘನ ತ್ಯಾಜ್ಯ ನಿರ್ವಹಣೆ ಮಾಡುತ್ತಿರುವ ಗ್ರಾಮ ಪಂಚಾಯತಿ ಮಟ್ಟದ ಒಕ್ಕೂಟ ಎಂದು ಗುರುತಿಸಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಪ್ರಶಸ್ತಿ ಪ್ರಧಾನ ಮಾಡಿದರು.

ರಾಜ್ಯ ಮಟ್ಟದ ಕಾರ್ಯಕ್ರಮದಲ್ಲಿ ಉಡುಪಿ ಜಿಲ್ಲೆಯ ಮಹಿಳೆಯರಿಂದ ಪೂರ್ಣಕುಂಭ ಸ್ವಾಗತ, ಯಕ್ಷಗಾನದ ವೇಷದ ಮಾನಿನಿಯರು, ಹುಲಿ ವೇಷದ ನಾರಿಯರು, ಸ್ತ್ರೀಯರ ಚಂಡೆ ಬಳಗ, ಉಡುಪಿ ಸೀರೆ, ನೆಲಗಡಲೆ ಚಿಕ್ಕಿಯ ಸವಿ ಹೀಗೆ ರಾಜ್ಯ ಮಟ್ಟದ ಕಾರ್ಯಕ್ರಮದ ಮೆರುಗನ್ನು ಉಡುಪಿ ಜಿಲ್ಲೆ ಹೆಚ್ಚಿಸಿತು.

ಕಾರ್ಯಕ್ರಮದಲ್ಲಿ ಉನ್ನತ ಶಿಕ್ಷಣ ಐ.ಟಿ.ಬಿ.ಟಿ ವಿಜ್ಞಾನ ಮತ್ತು ತಂತ್ರಜ್ಞಾನ, ಕೌಶಲ್ಯಭಿವೃದ್ಧಿ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ. ಅಶ್ವತ್ಥನಾರಾಯಣ್, ಪ್ರಧಾನ ಕಾರ್ಯದರ್ಶಿಗಳು ಕೌಶಲ್ಯಭಿವೃದ್ಧಿ ಉದ್ಯಮಶೀಲತೆ ಜೀವನೋಪಾಯ ಇಲಾಖೆಯ ಡಾ. ಎಸ್ ಸೆಲ್ವ ಕುಮಾರ್, ಡಿ.ಎ.ವೈ- ಎನ್.ಎಲ್.ಎಂ ಅಭಿಯಾನ ನಿರ್ದೆಶಕರಾದ ಡಾ. ರಾಗಪ್ರಿಯ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.