ಬೆಂಗಳೂರು, ಏ. 2: ರಾಜ್ಯದಲ್ಲಿ ಒಂದೇ ದಿನ 284 ಪಾಸಿಟಿವ್ ಪ್ರಕರಣಗಳು ಕಂಡುಬಂದಿದ್ದು, ಓರ್ವ ವ್ಯಕ್ತಿ ಸೋಂಕಿಗೆ ಬಲಿಯಾಗಿದ್ದಾರೆ. ಬೆಂಗಳೂರು ನಗರದಲ್ಲಿ ಅತ್ಯಧಿಕ 170 ಮಂದಿ ಸೋಂಕಿತರಾಗಿದ್ದಾರೆ. ಶಿವಮೊಗ್ಗದಲ್ಲಿ 34, ಬಳ್ಳಾರಿಯಲ್ಲಿ 20 ಮಂದಿ ಸೋಂಕಿಗೆ ಒಳಗಾಗಿದ್ದಾರೆ. 132 ಮಂದಿ ರಾಜ್ಯಾದ್ಯಂತ ಗುಣಮುಖರಾಗಿದ್ದು, ಒಟ್ಟು 1,410 ಸಕ್ರಿಯ ಪ್ರಕರಣಗಳಿವೆ.
ದಕ್ಷಿಣ ಕನ್ನಡದಲ್ಲಿ ಇಂದು ಮೂರು ಪಾಸಿಟಿವ್ ಪ್ರಕರಣ ಕಂಡುಬಂದಿದ್ದು ಒಟ್ಟು 10 ಸಕ್ರಿಯ ಪ್ರಕರಣಗಳಿವೆ. ಉಡುಪಿಯಲ್ಲಿ ಇಂದು ಯಾವುದೇ ಪಾಸಿಟಿವ್ ಪ್ರಕರಣ ಕಂಡುಬಂದಿಲ್ಲ. ಜಿಲ್ಲೆಯಲ್ಲಿ ಒಟ್ಟು 4 ಸಕ್ರಿಯ ಪ್ರಕರಣಗಳಿವೆ.
ಮಹಾರಾಷ್ಟ್ರದಲ್ಲಿ ಒಂದೇ ದಿನ 562 ಮಂದಿ ಕೋವಿಡ್ ಸೋಂಕಿಗೆ ಒಳಗಾಗಿದ್ದು, ಮೂವರು ಬಲಿಯಾಗಿದ್ದಾರೆ. ರಾಜ್ಯದಲ್ಲಿ ಒಟ್ಟು 3,488 ಸಕ್ರಿಯ ಪ್ರಕರಣಗಳಿವೆ.