Tuesday, September 17, 2024
Tuesday, September 17, 2024

ಕೆನರಾ ಸಾಧಕರಿಗೆ ಸನ್ಮಾನ ಸಮಾರಂಭ

ಕೆನರಾ ಸಾಧಕರಿಗೆ ಸನ್ಮಾನ ಸಮಾರಂಭ

Date:

ಮಂಗಳೂರು, ಏ. 26: ಕೆನರಾ ಪದವಿಪೂರ್ವ ಕಾಲೇಜು ಮತ್ತು ಕೆನರಾ ವಿಕಾಸ್ ಪಿ.ಯು ಕಾಲೇಜು ಮಂಗಳೂರು ಇಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷೆಯಲ್ಲಿ ಉನ್ನತ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಿ ಅಭಿನಂದನೆ ಸಲ್ಲಿಸುವ ಕಾರ್ಯಕ್ರಮವು ಮಂಗಳೂರಿನ ಟಿ .ವಿ. ರಮಣ್ ಪೈ ಕನ್ವೆನ್ಷನ್ ಸಭಾಂಗಣದಲ್ಲಿ ನಡೆಯಿತು. ಕೆನರಾ ವಿಕಾಸ್ ಪಿ.ಯು ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ 600 ಕ್ಕೆ 596 ಅಂಕಗಳಿಸಿ ಎರಡನೇ ಸ್ಥಾನ ಪಡೆದುಕೊಂಡ ಸ್ವಾತಿ ಎಸ್. ಪೈ ಮತ್ತು ಕೆನರಾ ಪದವಿಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದಲ್ಲಿ 595 ಅಂಕ ಗಳಿಸಿ ತೃತೀಯ ಸ್ಥಾನ ಪಡೆದ ಪ್ರತೀಕ್ ಮಲ್ಯ, ವಿಜ್ಞಾನ ವಿಭಾಗದಲ್ಲಿ 592 ಅಂಕ ಗಳಿಸಿ ಐದನೇ ಸ್ಥಾನ ಪಡೆದ ವೈಭವಿ ನಾಗರಾಜ ನಾಯಕ್ ಇವರುಗಳನ್ನು ಸನ್ಮಾನಿಸಲಾಯಿತು.

570ಕ್ಕಿಂತ ಅಧಿಕ ಅಥವಾ 95 ಶೇಕಡಕ್ಕಿಂತ ಹೆಚ್ಚು ಅಂಕಗಳಿಸಿದ ಕೆನರಾ ಪಿ.ಯು ಕಾಲೇಜಿನ ವಿಜ್ಞಾನ ವಿಭಾಗದ 14 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದ 26 ವಿದ್ಯಾರ್ಥಿಗಳು ಹಾಗೂ ಕೆನರಾ ವಿಕಾಸ್ ಪಿ.ಯು. ಕಾಲೇಜಿನ ವಿಜ್ಞಾನ ವಿಭಾಗದ 8 ವಿದ್ಯಾರ್ಥಿಗಳು ವಾಣಿಜ್ಯ ವಿಭಾಗದ 7 ವಿದ್ಯಾರ್ಥಿಗಳನ್ನು ಅಭಿನಂದಿಸಿ ಗೌರವಿಸಲಾಯಿತು.

ಸಮಾರಂಭದಲ್ಲಿ ಕೆನರಾ ಪಿ.ಯು ಕಾಲೇಜಿನ ಸಂಚಾಲಕರಾದ ಟಿ. ಗೋಪಾಲಕೃಷ್ಣ ಶೆಣೈ ಅವರು ಮಾತನಾಡಿ, ನಮ್ಮ ಕೆನರಾ ಸಂಸ್ಥೆಯ ವಿದ್ಯಾರ್ಥಿಗಳು ರಾಜ್ಯಮಟ್ಟದಲ್ಲಿ ತೋರಿದ ಸಾಧನೆ ಗಮನಾರ್ಹವಾದುದು. ಕೆನರಾ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ ಎಂಬುವುದಕ್ಕೆ ನಮ್ಮ ವಿದ್ಯಾರ್ಥಿಗಳ ಸಾಧನೆ ಸಾಕ್ಷಿಯಾಗಿದೆ ಎಂದು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಕೆನರಾ ವಿಕಾಸ ಪಿಯು ಕಾಲೇಜಿನ ಸಂಚಾಲಕರಾದ ಸಿ.ಎ ಎಂ. ವಾಮನ್ ಕಾಮತ್ ರವರು ಮಾತನಾಡಿ, ಕೆನರಾ ಸಂಸ್ಥೆಗಳಲ್ಲಿ ಓದಿದ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಪ್ರಸಿದ್ಧಿ ಪಡೆದಿದ್ದಾರ. ಇದಕ್ಕೆ ಪೂರಕವೆಂಬಂತೆ ಇಂದು ಕೂಡ ನಮ್ಮ ಸಂಸ್ಥೆಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳ ಸಾಧನೆ ಹೆಮ್ಮೆಪಡುವಂಥದ್ದು ಎಂದು ವಿದ್ಯಾರ್ಥಿಗಳನ್ನು ಅಭಿನಂದಿಸಿದರು.

ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಕೆನರಾ ಶಿಕ್ಷಣ ಸಂಸ್ಥೆಗಳ ಗೌರವ ಕಾರ್ಯದರ್ಶಿ ಎಂ.ರಂಗನಾಥ ಭಟ್ ರವರು ಮಾತನಾಡಿ, ಕೆನರಾ ಶಿಕ್ಷಣ ಸಂಸ್ಥೆಗಳು ಇಂದು ನಿನ್ನೆಯದ್ದಲ್ಲ. ಈ ಶಿಕ್ಷಣ ಸಂಸ್ಥೆಗಳ ಬಗೆಗೆ ನಾಡಿನ ಜನರಿಗೆ ಅಪಾರ ಅಭಿಮಾನವಿದೆ. ಈ ಅಭಿಮಾನ ಇನ್ನಷ್ಟು ಹೆಚ್ಚಾಗುವಂತೆ ನಮ್ಮ ವಿದ್ಯಾರ್ಥಿಗಳು ಸಾಧನೆ ತೋರಿದ್ದಾರೆ. ಅಂತಹ ನಮ್ಮೆಲ್ಲ ವಿದ್ಯಾರ್ಥಿಗಳಿಗೆ ನಮ್ಮ ಶಿಕ್ಷಣ ಸಂಸ್ಥೆಯ ಪರವಾಗಿ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಅಭಿಮಾನ ವ್ಯಕ್ತಪಡಿಸಿದರು.

ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಸಂಯೋಜಕರಾದ ಬಸ್ತಿ ಪುರುಷೋತ್ತಮ ಶೆಣೈ, ಕೆನರಾ ವಿಕಾಸ್ ಕಾಲೇಜಿನ ಮ್ಯಾನೇಜರ್ ರಾಘವೇಂದ್ರ ಕುಡ್ವ, ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಜಂಟಿ ಕಾರ್ಯದರ್ಶಿ ಎಂ. ಸುರೇಶ್ ಕಾಮತ್, ಕೆನರಾ ಹೈಸ್ಕೂಲ್ ಅಸೋಸಿಯೇಷನ್ ಸಮಿತಿ ಸದಸ್ಯ ಎಂ. ನರೇಶ್ ಶೆಣೈ, ಕೆನರಾ ಪಿ. ಯು. ಕಾಲೇಜಿನ ಡೀನ್ ಗೋಪಾಲಕೃಷ್ಣ ಶೆಟ್ಟಿ, ಕೆನರಾ ಪಿ.ಯು. ಕಾಲೇಜಿನ ಪ್ರಾಂಶುಪಾಲೆ ಲತಾ ಮಹೇಶ್ವರಿ ಕೆ ಬಿ., ಕೆನರಾ ವಿಕಾಸ್ ಪಿ.ಯು ಕಾಲೇಜಿನ ಪ್ರಾಂಶುಪಾಲೆ ಐಶ್ವರ್ಯ ಕೆ. ಉಪಸ್ಥಿತರಿದ್ದರು.

ಕೆನರಾ ಶಿಕ್ಷಣ ಸಂಸ್ಥೆಗಳ ಪಿ. ಆರ್. ಓ ಉಜ್ವಲ್ ಮಲ್ಯ ನಿರೂಪಿಸಿ ವಂದಿಸಿದರು. ಕೆನರಾ ಪಿ.ಯು. ಕಾಲೇಜಿನ ಇಂಗ್ಲಿಷ್ ಉಪನ್ಯಾಸಕಿ ಸುಜಾತ ಪಿ.ವಿ ಸಾಧನೆ ಮಾಡಿದ ವಿದ್ಯಾರ್ಥಿಗಳ ಹೆಸರುಗಳನ್ನು ಪ್ರಸ್ತುತಪಡಿಸಿದರು. ಬೋಧಕ ಬೋಧಕೇತರರು, ಪೋಷಕರು, ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!