Tuesday, September 17, 2024
Tuesday, September 17, 2024

ಮುಂಗಾರು ಪೂರ್ವ ಮಳೆ ಕೊರತೆ: ರಾಜ್ಯದ ಜಲಾಶಯಗಳಲ್ಲಿ ಕುಸಿಯುತ್ತಿರುವ ನೀರಿನ ಮಟ್ಟ

ಮುಂಗಾರು ಪೂರ್ವ ಮಳೆ ಕೊರತೆ: ರಾಜ್ಯದ ಜಲಾಶಯಗಳಲ್ಲಿ ಕುಸಿಯುತ್ತಿರುವ ನೀರಿನ ಮಟ್ಟ

Date:

ಬೆಂಗಳೂರು, ಮೇ 2: ಈ ಬಾರಿ ಮುಂಗಾರು ಪೂರ್ವ ಮಳೆಯಲ್ಲಿ ಕೊರತೆ ಉಂಟಾದ ಕಾರಣ ಮತ್ತು ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ರಾಜ್ಯಾದ್ಯಂತ ಜಲಾಶಯಗಳಲ್ಲಿ ನೀರಿನ ಕುಸಿಯುತ್ತಿದೆ. ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರದಿಯ ಪ್ರಕಾರ, ಏಪ್ರಿಲ್ 29 ರಂದು, ರಾಜ್ಯದ ಪ್ರಮುಖ 13 ಜಲಾಶಯಗಳಲ್ಲಿ ನೀರಿನ ಮಟ್ಟ ಸರಾಸರಿ ಶೇ. 27 ರಷ್ಟು ಇದೆ. ಜನವರಿ 1 ರಿಂದ ಮೇ 31, 2023 ರವರೆಗೆ 129 ಮಿಮೀ ಸಾಮಾನ್ಯ ಪೂರ್ವ ಮುಂಗಾರು ಮಳೆಯಾಗಬೇಕಿತ್ತು. ಆದರೆ ಕೇವಲ 39.7 ಮಿಮೀ ಮಳೆಯಾಗಿದೆ.

ಕಾವೇರಿ ಜಲಾನಯನ ಜಲಾಶಯಗಳಲ್ಲಿ 40.74 ಟಿಎಂಸಿ ನೀರು ಸಂಗ್ರಹವಾಗಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ 57.32 ಟಿಎಂಸಿ ನೀರು ಇತ್ತು. ಕೃಷ್ಣಾ ಜಲಾನಯನ ಪ್ರದೇಶದಲ್ಲಿ ಕಳೆದ ವರ್ಷ 132.98 ಟಿಎಂಸಿ ಸಂಗ್ರಹವಾಗಿತ್ತು. ಆದರೆ ಈ ವರ್ಷ ಕೇವಲ 99.09 ಟಿಎಂಸಿ ನೀರಿ ಸಂಗ್ರಹವಾಗಿದೆ. ತುಂಗಭದ್ರಾ ಜಲಾಶಯದಲ್ಲಿ 2.81 ಟಿಎಂಸಿ ನೀರು ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನೀರಿನ ಪ್ರಮಾಣ ಸಾಕಷ್ಟು ಕಡಿಮೆಯಾಗಿದೆ. ಈ ಜಲಾಶಯದ ಒಟ್ಟು ಸಂಗ್ರಹ ಸಾಮರ್ಥ್ಯ 105.79 ಟಿಎಂಸಿ ಇದೆ. ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ 8.87 ಟಿಎಂಸಿ ನೀರು ಸಂಗ್ರಹವಾಗಿತ್ತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶಾರದಾ ರೆಸಿಡೆನ್ಸಿಯಲ್ ಶಾಲೆ: ಇಂಟರಾಕ್ಟ್ ಪದಗ್ರಹಣ

ಉಡುಪಿ, ಸೆ.16: ರೋಟರಿ ಉಡುಪಿ ಪ್ರಾಯೋಜಿತ ಶಾರದಾ ರೆಸಿಡೆನ್ಸಿಯಲ್ ಸ್ಕೂಲ್ ಉಡುಪಿ...

ಕಬಡ್ಡಿ: ಸಾಯ್ಬ್ರಕಟ್ಟೆ ಶಾಲಾ ತಂಡದ ಸಾಧನೆ

ಕೋಟ, ಸೆ.16: ನಿಟ್ಟೂರು ಪ್ರೌಢಶಾಲೆಯಲ್ಲಿ ನಡೆದ ಜಿಲ್ಲಾಮಟ್ಟದ ೧೪ರ ವಯೋಮಾನದ ಬಾಲಕರ...

ವಿಪ್ರ ಮಹಿಳಾ ವಲಯ ವಾರ್ಷಿಕೋತ್ಸವ

ಕೋಟ, ಸೆ.16: ವಿಪ್ರ ಮಹಿಳಾ ವಲಯ ಸಾಲಿಗ್ರಾಮ ಇದರ 5ನೇ ವರ್ಷದ...

ವಿಶ್ವಕರ್ಮ ಯಜ್ಞ

ಕೋಟ, ಸೆ.16: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ,...
error: Content is protected !!