ಬೆಂಗಳೂರು, ಮೇ 2: ಮೇ 10 ರಂದು ರಾಜ್ಯ ವಿಧಾನಸಭಾ ಚುನಾವಣೆ ನಡೆಯಲಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಆಡಳಿತಾರೂಢ ಬಿಜೆಪಿ, ಕಾಂಗ್ರೆಸ್ ಸೇರಿದಂತೆ ವಿವಿಧ ಚಾನೆಲ್ ಗಳು, ಸಂಸ್ಥೆಗಳು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿದ್ದು, ಇಲ್ಲಿಯವರೆಗೆ ನಡೆದ ಬಹುತೇಕ ಎಲ್ಲಾ ಸಮೀಕ್ಷೆಗಳಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಭಾರೀ ಮುನ್ನಡೆ ಸಿಗಲಿದೆ ಎಂದೇ ಹೇಳಲಾಗುತಿತ್ತು. ಪ್ರಧಾನಿ ನರೇಂದ್ರ ಮೋದಿ ಪ್ರಚಾರಕ್ಕೆ ಇಳಿದ ನಂತರ ಸಮೀಕ್ಷೆಗಳೆಲ್ಲಾ ಬದಲಾಗಿದೆ ಎಂದು ಬಿಜೆಪಿ ವಲಯದಲ್ಲಿ ಚರ್ಚೆ ನಡೆಯುತ್ತಿದೆ.
ನ್ಯೂಸ್ 18 ಕನ್ನಡ ಮತ್ತು ಕನ್ವರ್ಜೆಂಟ್ ಸಂಸ್ಥೆ ಚುನಾವಣಾ ಪೂರ್ವ ಸಮೀಕ್ಷೆ ಮಾಹಿತಿಯನ್ನು ಹಂಚಿಕೊಂಡಿದ್ದು, ಇತ್ತೀಚಿಗೆ ನಡೆಸಿದ ಸಮೀಕ್ಷೆ ಪ್ರಕಾರ ಬಿಜೆಪಿ 105, ಕಾಂಗ್ರೆಸ್ 87 ಹಾಗೂ ಜೆಡಿಎಸ್ 32 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಹೇಳಲಾಗಿದೆ. ಜೀ ನ್ಯೂಸ್ ಸಮೀಕ್ಷೆ ಪ್ರಕಾರ ಬಿಜೆಪಿ 103-115, ಕಾಂಗ್ರೆಸ್ 79-91, ಜೆಡಿಎಸ್ 26-36 ಇತರರು 1-3 ಸೀಟುಗಳನ್ನು ಪಡೆಯುವುದಾಗಿ ಹೇಳಲಾಗಿದೆ.