ಬೆಂಗಳೂರು, ಸೆ.25: ರಾಜ್ಯದ ಪ್ರಪ್ರಥಮ 370 ಮೆಗಾವ್ಯಾಟ್ ಸಾಮರ್ಥ್ಯದ ನೈಸರ್ಗಿಕ ಅನಿಲ ಆಧಾರಿತ ಯಲಹಂಕ ಸಂಯುಕ್ತ ಆವರ್ತ ವಿದ್ಯುತ್ ಸ್ಥಾವರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆಗೊಳಿಸಿದರು.
ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಇಂಧನ ಸಚಿವರಾದ ಕೆ.ಜೆ.ಜಾರ್ಜ್, ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್, ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ಕೆಕೆಆರ್‌ಡಿಬಿ ಅಧ್ಯಕ್ಷರಾದ ಅಜಯ್ ಸಿಂಗ್, ಶಾಸಕರಾದ ಯಲಹಂಕ ವಿಶ್ವನಾಥ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ವಿಧಾನ ಪರಿಷತ್ ಸದಸ್ಯರಾದ ಪ್ರಕಾಶ್ ರಾಥೋಡ್ ಮತ್ತು ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.