Sunday, January 19, 2025
Sunday, January 19, 2025

ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ವಿತರಿಸಲು ಕ್ರಮ

ಅರ್ಹರಿಗೆ ಬಿಪಿಎಲ್‌ ಕಾರ್ಡ್‌ ವಿತರಿಸಲು ಕ್ರಮ

Date:

ಬೆಳಗಾವಿ, ಡಿ.11: ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಪಕ್ವವಾದ ದತ್ತಾಂಶ ಸಂಗ್ರಹಿಸಿ ಅರ್ಹರಿಗೆ ಬಿಪಿಎಲ್‌ ಪಡಿತರ ಕಾರ್ಡ್‌ ವಿತರಿಸಲು ಕ್ರಮ ಕೈಗೊಳ್ಳಲಾಗುವುದು. ಅನರ್ಹ ಬಿಪಿಎಲ್‌ ಕಾರ್ಡ್‌ಗಳನ್ನು ರದ್ದುಗೊಳಿಸಲಾಗುವುದು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಹಾಗೂ ಕಾನೂನು ಮಾಪನಶಾಸ್ತ್ರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ಬೆಳಗಾವಿಯ ಚಳಿಗಾಲದ ವಿಧಾನ ಮಂಡಲ ಅಧಿವೇಶನದಲ್ಲಿ ತಿಳಿಸಿದರು.

ರಾಜ್ಯದಲ್ಲಿ ಸುಮಾರು ಶೇಕಡ 65 ರಿಂದ 75ರಷ್ಟು ಜನಸಂಖ್ಯೆ ಬಡತನ ರೇಖೆಗಿಂತ ಕೆಳಗಿದ್ದಾರೆ ಎನ್ನುವ ಮಾಹಿತಿ ಇದೆ. ಬಡತನದಲ್ಲಿ ಇರುವ ಜನತೆಗೆ ಅನ್ಯಾಯ ಮಾಡಲು ಬಿಡುವುದಿಲ್ಲ. ಇನ್ನಷ್ಟು ಸಮಯ ಪಡೆದುಕೊಂಡು ಬಿಪಿಎಲ್ ಪಡಿತರದಾರರಿಗೆ ತೊಂದರೆಯಾಗದ ಹಾಗೆ ಎಪಿಎಲ್ ಕಾರ್ಡ್‌ಗೆ ಅರ್ಹ ಇರುವವರನ್ನು ಬಿಪಿಎಲ್‌ನಿಂದ ಬೇರ್ಪಡಿಸಲಾಗುವುದು.

ಪ್ರಸ್ತುತ ಈಗಿರುವ ಬಿಪಿಎಲ್ ಕಾರ್ಡ್‌ಗಳಲ್ಲಿ ಶೇಕಡ 20 ರಷ್ಟು ಎಪಿಎಲ್ ಕಾರ್ಡ್‌ದಾರರು ಸೇರಿದ್ದಾರೆ ಎಂದು ಅಂದಾಜಿಸಲಾಗಿದ್ದು, ಇದನ್ನು ಅತೀ ಶೀಘ್ರದಲ್ಲಿ ಪರಿಷ್ಕರಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುತ್ತೇವೆ. ಅರ್ಹ ಬಿಪಿಎಲ್ ಕಾರ್ಡ್‌ಗಳು ಯಾವುದೇ ರೀತಿಯಲ್ಲಿ ರದ್ದಾಗದಂತೆ ಎಚ್ಚರಿಕೆ ವಹಿಸಲಾಗುವುದು. ಅರ್ಹರ ಬಿಪಿಎಲ್ ಕಾರ್ಡ್‌ಗಳು ರದ್ದಾಗಿದ್ದರೆ ಅಂಥವರಿಗೆ ಪುನಃ ಕಾರ್ಡ್‌ ದೊರಕಿಸಿಕೊಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪಾಲ: ಕ್ಯಾನ್ಸರ್ ತಡೆಗಟ್ಟುವಿಕೆ ಮತ್ತು ನಿರ್ವಹಣೆಯ ಕುರಿತು ಕಾರ್ಯಗಾರ

ಮಣಿಪಾಲ, ಜ.18: ಸೆಂಟರ್ ಫಾರ್ ಕಮ್ಯೂನಿಟಿ ಆಂಕೋಲಜಿ, ಸಮುದಾಯ ವೈದ್ಯಕೀಯ ವಿಭಾಗ,...

ಡಿಸಿ ಕಚೇರಿಯ ಮೊದಲ ಗ್ರಂಥಾಲಯಕ್ಕೆ ಪುಸ್ತಕಗಳ ಕೊಡುಗೆ

ಮಣಿಪಾಲ, ಜ.18: ಕನ್ನಡ ಸಾಹಿತ್ಯ ಪರಿಷತ್ ಉಡುಪಿ ಜಿಲ್ಲೆ, ಉಡುಪಿ ತಾಲೂಕು...

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ತೀರ್ಮಾನ: ಮುಖ್ಯಮಂತ್ರಿ

ಮಂಗಳೂರು, ಜ.18: ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಮುಂದಿನ ಸಚಿವ...

ಎಮ್.ಜಿ.ಎಮ್. ಕಾಲೇಜಿನ ಉಚಿತ ಭೇೂಜನ ನಿಧಿಗೆ ದೇಣಿಗೆ ಹಸ್ತಾಂತರ

ಉಡುಪಿ, ಜ.18: ಎಂ.ಜಿ.ಎಂ. ಕಾಲೇಜಿನಲ್ಲಿ ಅರ್ಹ ಬಡ ವಿದ್ಯಾರ್ಥಿಗಳಿಗೆ ಪ್ರತಿ ವರ್ಷವೂ...
error: Content is protected !!