ಬೆಂಗಳೂರು, ಸೆ.12: ನಾಗಮಂಗಲದಲ್ಲಿ ಗಣಪತಿ ವಿಸರ್ಜನೆಯ ವೇಳೆ ಕಲ್ಲು ತೂರಾಟ ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಈ ಹಿಂದಿನ ವರ್ಷವೂ ಪುಂಡರು ಇದೇ ರೀತಿ ವರ್ತಿಸಿದ್ದ ಘಟನೆಯ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕಟ್ಟೆಚ್ಚರ ವಹಿಸಿದ್ದರೆ ಘಟನೆ ನಡೆಯುತ್ತಿರಲಿಲ್ಲ. ಶಾಂತಿಯುತ ಗಣಪತಿ ವಿಸರ್ಜನೆಯ ಸಂದರ್ಭದಲ್ಲಿ ನಡೆದಿರುವ ಈ ಘಟನೆ ಹಿಂದೂ ಸಮುದಾಯವನ್ನು ಪ್ರಚೋದಿಸುವ ಕುಕೃತ್ಯವಾಗಿದೆ. ಸೌಹಾರ್ದತೆಯ ಸಮಾಜದಲ್ಲಿ ದಳ್ಳುರಿ ಹಚ್ಚಲು ಯತ್ನಿಸುತ್ತಿರುವ, ಹಿಂದೂ ಸಮುದಾಯದ ಆಚಾರ ವಿಚಾರಗಳನ್ನು ದಮನ ಮಾಡುವ ರೀತಿಯಲ್ಲಿ ವರ್ತಿಸುತ್ತಿರುವವರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿ. ನಾಗಮಂಗಲ ಘಟನೆಯನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿ ಹಿಂದೂ ವಿರೋಧಿ ಚಟುವಟಿಕೆಗಳನ್ನು ಸಂಘಟಿಸುತ್ತಿರುವವರನ್ನು ನಿಗ್ರಹಿಸದೇ ಹೋದರೆ ಮುಂದಾಗುವ ಪರಿಣಾಮಗಳ ಹೊಣೆ ಸರ್ಕಾರವೇ ಹೊರಬೇಕಾಗುತ್ತದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ಶಾಂತಿಯುತ ಗಣಪತಿ ವಿಸರ್ಜನೆಯ ಸಂದರ್ಭದಲ್ಲಿ ನಡೆದಿರುವ ಕಲ್ಲು ತೂರಾಟ ಖಂಡನೀಯ: ಬಿ.ವೈ. ವಿಜಯೇಂದ್ರ
ಶಾಂತಿಯುತ ಗಣಪತಿ ವಿಸರ್ಜನೆಯ ಸಂದರ್ಭದಲ್ಲಿ ನಡೆದಿರುವ ಕಲ್ಲು ತೂರಾಟ ಖಂಡನೀಯ: ಬಿ.ವೈ. ವಿಜಯೇಂದ್ರ
Date: