ಬೆಂಗಳೂರು, ಡಿ.8: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಸಂಭವಿಸಿದ ಬಾಣಂತಿಯರ ಸಾವು ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಕಳಪೆ ಗುಣಮಟ್ಟದ ಔಷಧ ಸರಬರಾಜು ಮಾಡುತ್ತಿದ್ದ ಕಂಪನಿಯನ್ನು ಕಪ್ಪುಪಟ್ಟಿಗೆ ಸೇರಿಸಲಾಗಿದೆ ಹಾಗೂ ಔಷಧ ನಿಯಂತ್ರಕರನ್ನು ಅಮಾನತು ಮಾಡಲಾಗಿದೆ. ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಿ ವರದಿ ಸಲ್ಲಿಸಲು ಸೂಚಿಸಿದ್ದೇನೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಬಾಣಂತಿಯರ ಸಾವು ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಾಣಂತಿಯರ ಸಾವು ಪ್ರಕರಣದ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ: ಮುಖ್ಯಮಂತ್ರಿ ಸಿದ್ದರಾಮಯ್ಯ
Date: