ಬೆಂಗಳೂರು, ಜೂ.30: ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ ಸ್ವಚ್ಛತೆ ಇಲ್ಲದೆ ಕಲುಷಿತ, ವಿಷಾಹಾರ ಸೇವನೆ, ಕಲಬೆರಕೆ ಪದಾರ್ಥಗಳು, ಅವಧಿ ಮೀರಿದ ಪದಾರ್ಥಗಳ ಉಪಯೋಗಿಸುತ್ತಿರುವಂತಹ ಘಟನೆಗಳು ಸಂಭವಿಸುತ್ತಿರುವ ಬಗ್ಗೆ ದೂರುಗಳು ವ್ಯಕ್ತಗೊಂಡ ಹಿನ್ನೆಲೆ ಮುಖ್ಯಮಂತ್ರಿ ಕಚೇರಿಯ ಸಾರ್ವಜನಿಕ ಕುಂದುಕೊರತೆ ವಿಭಾಗದ ವಿಶೇಷ ಕರ್ತವ್ಯಾಧಿಕಾರಿಗಳು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರನ್ನು ಸಂಪರ್ಕಿಸಿ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.
ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಉತ್ತಮ ಗುಣಮಟ್ಟ, ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋಟೆಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ The Food Safety and Standards Act-2006 ಮತ್ತು 2011 ನಿಯಮಗಳಲ್ಲಿ ಸೂಚಿಸಿರುವ ಮಾರ್ಗಸೂಚಿಯಂತೆ ತಪಾಸಣೆ ನಡೆಸಿ ಸೂಕ್ತ ರೀತಿಯಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.