ಕೋಲಾರ: ಹಲ್ಲಿ ಬಿದ್ದಿದ್ದ ಆಹಾರ ಸೇವನೆ ಮಾಡಿ 34 ಮಂದಿ ಹಾಸ್ಟೆಲ್ ವಿದ್ಯಾರ್ಥಿಗಳು ಅಸ್ವಸ್ಥಗೊಂಡ ಘಟನೆ ಕೋಲಾರದ ದೊಡ್ಡಹಸಾಳ ಗ್ರಾಮದ ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್ನಲ್ಲಿ ನಡೆದಿದೆ. ಹಾಸ್ಟೆಲ್ನಲ್ಲಿ 40 ಜನ ವಿದ್ಯಾರ್ಥಿಗಳು ಇದ್ದರು. 34 ವಿದ್ಯಾರ್ಥಿಗಳು ಆಹಾರ ಸೇವನೆ ಮಾಡಿದ್ದರು ಎನ್ನಲಾಗಿದೆ.
ಆಹಾರ ಸೇವನೆ ಮಾಡಿ ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿಗಳು ವಾಂತಿ ಮಾಡಿ ಅಸ್ವಸ್ಥಗೊಂಡಿದ್ದು ತಕ್ಷಣ ವಿದ್ಯಾರ್ಥಿಗಳನ್ನು ಕೋಲಾರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಜಿಲ್ಲಾಸ್ಪತ್ರೆಗೆ ಪೊಲೀಸರು ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪೊಲೀಸರು ಕೂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.