ಬೆಂಗಳೂರು, ಆ.23: ಬೆಂಗಳೂರು ನಗರದ ಹೆಬ್ಬಾಳ ಮೇಲ್ಸೇತುವೆ ಪ್ರದೇಶದಿಂದ ಹೊಸೂರು ರಸ್ತೆಯ ಸಿಲ್ಕ್ ಬೋರ್ಡ್ ಜಂಕ್ಷನ್‌ನ ಮೇಲ್ಸೇತುವೆಯವರೆಗೆ ಭೂಗತ ವಾಹನ ಸುರಂಗ ಮಾರ್ಗವನ್ನು ನಿರ್ಮಿಸುವ ಯೋಜನೆಗೆ ಗುರುವಾರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಈ ಯೋಜನೆಯ ಅಂದಾಜು ವೆಚ್ಚ ರೂ.12,690 ಕೋಟಿ.
ಈ ಬಗ್ಗೆ ಮಾಹಿತಿ ನೀಡಿರುವ ಕಾನೂನು ಸಚಿವ ಎಚ್.ಕೆ.ಪಾಟೀಲ್, “ಬೆಂಗಳೂರು ನಗರದ ವಾಹನ ದಟ್ಟಣೆ ನಿವಾರಿಸಲು ಇದೊಂದು ಉತ್ತಮ ಯೋಜನೆ. ಸುಮಾರು 190 ಕಿ.ಮೀ ಉದ್ದದ ವಾಹನ ದಟ್ಟಣೆಯ 11 ಕಾರಿಡಾರ್‌ಗಳನ್ನು ಆಯ್ಕೆ ಮಾಡಿ, ಭೂಗತ ವಾಹನ ಸುರಂಗ ಮಾರ್ಗ ಸೂಕ್ತವೆಂದು ಅಭಿಪ್ರಾಯಪಡಲಾಗಿದೆ. ಅಲ್ಲದೇ ಬೆಂಗಳೂರು ಹೃದಯ ಭಾಗದಲ್ಲಿ ಒಟ್ಟು ಸುಮಾರು 99.50 ಕಿ.ಮೀ. ಉದ್ದದ 17 ಮೇಲ್ಸೇತುವೆ ನಿರ್ಮಾಣ ಮಾಡಲು ಉದ್ದೇಶಿಸಲಾಗಿದೆ. ಇದಕ್ಕೆ ಸಮಗ್ರ ಯೋಜನಾ ವರದಿ ಸಿದ್ಧಪಡಿಸಬೇಕಿದೆ ಎಂದು ಅವರು ತಿಳಿಸಿದ್ದಾರೆ.