ಮಂಗಳೂರು, ಮೇ.2: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಬರ್ಬರ ಹತ್ಯೆಗೆ ಇಡೀ ರಾಜ್ಯದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಕಾಶ್ಮೀರದಲ್ಲಿ ಹಿಂದೂಗಳ ಹತ್ಯೆಯ ದುರ್ಘಟನೆ ಮರೆಯುವ ಮುನ್ನವೇ ನಡೆದಿರುವುದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ. ಗುರುವಾರ ರಾತ್ರಿ ಕೊಲೆಯಾದ ಹಿಂದು ಸಂಘಟನೆಯ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ ನಂತರ ಸುದ್ಧಿಗಾರರೊಂದಿಗೆ ಅವರು ಮಾತನಾಡಿದರು. ಭಾರತೀಯ ಜನತಾ ಪಾರ್ಟಿಯ ನಾಯಕರು ಹಿಂದೂ ಕಾರ್ಯಕರ್ತ ಸುಹಾಸ್ ಅವರ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ, ಆ ಕುಟುಂಬದ ಜೊತೆ ನಾವಿದ್ದೇವೆ ಎಂಬ ಅಭಯ ತುಂಬಿ ಬಿಜೆಪಿ ಕರ್ನಾಟಕ ವತಿಯಿಂದ ಆರ್ಥಿಕ ಸಹಾಯ ಮಾಡಿದ್ದೇವೆ. ಈ ಸರ್ಕಾರಕ್ಕೆ ಮನುಷ್ಯತ್ವವಿದ್ದರೆ ಆ ಕುಟುಂಬಕ್ಕೆ ಪರಿಹಾರ ಘೋಷಿಸಿ, ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ ಆ ಕುಟುಂಬಕ್ಕೆ ನ್ಯಾಯ ಕೊಡಿಸಲಿ ಎಂದು ವಿಜಯೇಂದ್ರ ಆಗ್ರಹಿಸಿದರು.
ಸುಹಾಸ್ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ: ವಿಜಯೇಂದ್ರ ಆಗ್ರಹ
ಸುಹಾಸ್ ಕೊಲೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಿ: ವಿಜಯೇಂದ್ರ ಆಗ್ರಹ
Date:




By
ForthFocus™