Home ಸುದ್ಧಿಗಳು ರಾಜ್ಯ ಬಿಜೆಪಿ ಫ್ಲೆಕ್ಸ್‌ನಲ್ಲಿ ಸುಮಲತಾ ಅಂಬರೀಶ್ ಫೋಟೋ

ಬಿಜೆಪಿ ಫ್ಲೆಕ್ಸ್‌ನಲ್ಲಿ ಸುಮಲತಾ ಅಂಬರೀಶ್ ಫೋಟೋ

367
0

ಮಂಡ್ಯ: ಮಂಡ್ಯಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನದ ಹಿನ್ನಲೆಯಲ್ಲಿ ಶುಭಾಶಯ ಕೋರುವ ಬಿಜೆಪಿ ಫ್ಲೆಕ್ಸ್ ನಲ್ಲಿ ಪಕ್ಷೇತರವಾಗಿ ಲೋಕಸಭೆ ಚುನಾವಣೆ ಗೆದ್ದ ಸುಮಲತಾ ಅಂಬರೀಶ್ ಅವರ ಫೋಟೋ ಮುದ್ರಿಸಲಾಗಿದ್ದು ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಸಂಸದೆಯ ಆಪ್ತ ಇಂಡವಾಳು ಸಚ್ಚಿದಾನಂದ ಸ್ವಾಗತ ಕೋರಿರುವ ಫ್ಲೆಕ್ಸ್ ನಲ್ಲಿ ಸುಮಲತಾ ಫೋಟೋ ಹಾಕಲಾಗಿದೆ.

ಸುಮಲತಾ ಬಿಜೆಪಿ ಸೇರುತ್ತಾರೆಯೇ? ಸಂಸದೆ ಸುಮಲತಾ ಅಂಬರೀಶ್ ಬಿಜೆಪಿ ಸೇರುತ್ತಾರೆಯೇ ಎಂಬ ಪ್ರಶ್ನೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯೆ ನೀಡಿದ್ದಾರೆ. ಬಿಜೆಪಿ ಪಕ್ಷಕ್ಕೆ ಮಂಡ್ಯದ ಸಂಸದೆ ಸುಮಲತಾ ಸೇರ್ಪಡೆಯಾಗುವ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ. ಬಿಜೆಪಿ ಫ್ಲೆಕ್ಸ್‌ಗಳಲ್ಲಿ ಫೋಟೋವನ್ನು ಅವರ ಹಿತೈಷಿಗಳು ಹಾಕಿಸಿರಬಹುದು ಎಂದು ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.