Saturday, November 21, 2026
Saturday, November 21, 2026

ನಮ್ಮ ಬಸವಣ್ಣನವರ ಗೌರವಕ್ಕೆ ಧಕ್ಕೆಯಾದರೆ ಸರ್ಕಾರ ಸುಮ್ಮನಿರಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ನಮ್ಮ ಬಸವಣ್ಣನವರ ಗೌರವಕ್ಕೆ ಧಕ್ಕೆಯಾದರೆ ಸರ್ಕಾರ ಸುಮ್ಮನಿರಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Date:

ಬೆಂಗಳೂರು, ನ.20: ಕರ್ನಾಟಕದ ಸಾಂಸ್ಕೃತಿಕ ನಾಯಕ, ಕ್ರಾಂತಿಕಾರಿ ಮಾರ್ಗದ ಹರಿಕಾರ ಜಗಜ್ಯೋತಿ ಬಸವಣ್ಣನವರು ನಮ್ಮೆಲ್ಲರ ಅಸ್ಮಿತೆ. 12ನೇ ಶತಮಾನದಲ್ಲಿಯೇ ಕರ್ನಾಟಕದ ಸಾಮಾಜಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಇತಿಹಾಸಕ್ಕೆ ಹೊಸ ದಿಕ್ಕು ನೀಡಿದ ಮಹಾನ್ ಚೇತನರು.

ಜಗತ್ತಿಗೆ ಮೊಟ್ಟಮೊದಲ ಬಾರಿಗೆ ‘ಅನುಭವ ಮಂಟಪ’ದ ಮೂಲಕ ಸಂಸತ್ತು ಪರಿಕಲ್ಪನೆಯನ್ನು ನೀಡಿದ ಕೀರ್ತಿ ಬಸವಣ್ಣನವರಿಗೆ ಸಲ್ಲುತ್ತದೆ. ಸಮಾನತೆ, ಕಾಯಕ, ದಾಸೋಹ, ಮಾನವೀಯತೆ, ಸಾಮಾಜಿಕ ನ್ಯಾಯ ಹಾಗೂ ಮಹಿಳೆಯರಿಗೆ ಸಮಾನ ಹಕ್ಕುಗಳನ್ನು ಪ್ರತಿಪಾದಿಸಿದ ಮಹಾನ್ ಮಾನವತಾವಾದಿ ನಮ್ಮ ಬಸವಣ್ಣನವರು.

ನಮ್ಮ ಸರ್ಕಾರವು ಬಸವಣ್ಣನವರ ಇದೇ ಕಾಯಕ ತತ್ವಗಳ ಅಡಿಯಲ್ಲಿ ಜನಪರವಾಗಿ ಕಾರ್ಯನಿರ್ವಹಿಸುತ್ತಿದ್ದು, ಅವರ ಆಶಯಗಳನ್ನು ಸದಾ ಗೌರವಿಸುತ್ತಾ ಪಾಲಿಸುತ್ತಾ ಬಂದಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಆದರೆ, ಇದೀಗ ರವಿ ಹಂಜ್‌ ಎನ್ನುವ ಲೇಖಕ ʻಬಸವ ಮಂಟಪ’ ಎಂಬ ವಿವಾದಿತ ಪುಸ್ತಕವನ್ನು ಬರೆದು, ಬಸವಣ್ಣನವರ ಬಗ್ಗೆ ಅತ್ಯಂತ ಅವಹೇಳನಕಾರಿಯಾಗಿ ನಿಂದಿಸಿರುವುದು ಖಂಡನೀಯ ಎಂದು ಸಿಎಂ ಹೇಳಿದ್ದಾರೆ. ಇಡೀ ಮಾನವ ಕುಲಕ್ಕೆ ದಾರಿದೀಪವಾದಂತಹ ಮಹಾನ್ ಸಮಾಜ ಸುಧಾರಕನಿಗೆ ಮಾಡಿರುವ ಈ ಅವಮಾನವನ್ನು ನಮ್ಮ ಸರ್ಕಾರ ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ.

ಈ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ, ನಾಡಿನ ಸಾಂಸ್ಕೃತಿಕ ನಾಯಕನಿಗೆ ಅಪಮಾನ ಎಸಗಿದ ಲೇಖಕ ರವಿ ಹಂಜ್‌ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದೇವೆ. ನಾಡಿನ ಮಹನೀಯರ ಬಗ್ಗೆ ಹಗುರವಾಗಿ ಬರೆಯುವ ಮತ್ತು ಸಮಾಜದ ಶಾಂತಿ ಕದಡುವ ಇಂತಹ ಕಿಡಿಗೇಡಿಗಳ ವಿರುದ್ಧ ಯಾವುದೇ ಮುಲಾಜಿಲ್ಲದೆ, ಸರ್ಕಾರ ಅತ್ಯಂತ ಕಠಿಣ ಕಾನೂನು ಕ್ರಮ ಕೈಗೊಳ್ಳಲಿದೆ.

ಬಸವಣ್ಣನವರ ತತ್ವಗಳಿಗೆ ಹಾಗೂ ಕನ್ನಡಿಗರ ಭಾವನೆಗಳಿಗೆ ಧಕ್ಕೆ ತರುವ ಯಾವುದೇ ಪ್ರಯತ್ನಗಳನ್ನು ನಮ್ಮ ಸರ್ಕಾರ ನಿರ್ದಾಕ್ಷಿಣ್ಯವಾಗಿ ಮಟ್ಟಹಾಕಲಿದೆ ಎಂದು ಸಿಎಂ ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವ್ಯವಹಾರಸ್ಥರ ಉತ್ತಮ ನಡವಳಿಕೆಯಿಂದ ಸಂಸ್ಥೆಯ ಮೌಲ್ಯ ವೃದ್ಧಿ: ನರೇಂದ್ರ ಎಸ್ ಗಂಗೊಳ್ಳಿ

ಕುಂದಾಪುರ, ನ.21: ಗಂಗೊಳ್ಳಿಯ ಶ್ರೀ ವೆಂಕಟೇಶ ಕೃಪಾ ಟ್ರೇಡರ್ಸ್ ಇವರು ಹಮ್ಮಿಕೊಂಡಿದ್ದ...

ವೈಯಕ್ತಿಕ ಬಿಸಿನೆಸ್ ಕರೆಸ್ಪಾಂಡೆಂಟ್‌ಗಳ ನೇಮಕಾತಿ : ಅರ್ಜಿ ಆಹ್ವಾನ

ಉಡುಪಿ, ನ.21: ಅಂಚೆ ಕಚೇರಿಯ ಬ್ಯಾಂಕ್ ಆದ ಇಂಡಿಯಾ ಪೋಸ್ಟ್ ಪೇಮೆಂಟ್ಸ್...

ಬಡ್ಡಿ ಸಹಾಯಧನ ಸಾಲದ ಖಾತೆಗೆ ಜಮಾ: ಪ್ರಸ್ತಾವನೆ ಆಹ್ವಾನ

ಉಡುಪಿ, ನ.21: ಕೇಂದ್ರ ಸರ್ಕಾರದ ಎಂ.ಎಸ್.ಎA.ಇ ಮಂತ್ರಾಲಯ ಹಾಗೂ ರಾಜ್ಯ ಸರ್ಕಾರದ...

ಉಚಿತ ಆರೋಗ್ಯ ಶಿಬಿರಗಳು ಅತ್ಯಂತ ಅವಶ್ಯಕ: ಪ್ರಸಾದ್ ಮಲ್ಯ

ಉಡುಪಿ, ನ.21: ಹರಿಖಂಡಿಗೆಯ ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಸಂಸ್ಥೆಯ...
error: Content is protected !!