Sunday, August 30, 2026
Sunday, August 30, 2026

ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

ಬೆಂಗಳೂರು, ಜೂ.7: ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರವಾಗಲೀ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ನೀಟ್ ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕಗಳು ಬಂದಿವೆ. ಅಂದರೆ 100% ಅಂಕಗಳು‌ ಬಂದಿದೆ. ಆದರೆ ಈ ಹಿಂದೆ ಬಂದ ಟಾಪರ್‍‌ಗಳ ಸಂಖ್ಯೆ ಎಷ್ಟು? ಎಂಬುದನ್ನು ಹೋಲಿಕೆ ಮಾಡಿ ನೋಡಿದರೆ ಈ ಬಾರಿಯ ಫಲಿತಾಂಶದಲ್ಲಿ ಅಕ್ರಮದ ವಾಸನೆ ಬಡಿಯುತ್ತದೆ. 2019ರಲ್ಲಿ ಒಬ್ಬ ವಿದ್ಯಾರ್ಥಿ, 2020ರಲ್ಲಿ ಒಬ್ಬ, 2021ರಲ್ಲಿ ಮೂವರು, 2022ರಲ್ಲಿ ಒಬ್ಬ, 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರು ಪ್ರತಿಶತ ಅಂಕ ಪಡೆದಿದ್ದರೆ ಈ ವರ್ಷ 67 ವಿದ್ಯಾರ್ಥಿಗಳು ಟಾಪರ್‍ಗಳಾಗಿ ಹೊರಹೊಮ್ಮಿದ್ದಾರೆ. ನೀಟ್‌ ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ ಋಣಾತ್ಮಕ ಅಂಕಗಳಿರುವ ಕಾರಣ ಇಷ್ಟೊಂದು ಮಂದಿ ನೂರು ಪ್ರತಿಶತ ಅಂಕ ಗಳಿಸುವುದು ಅಸಾಧ್ಯವೇ ಸರಿ. ಇದು ಕಾಕತಾಳೀಯವೋ ಅಥವಾ ಕೇಂದ್ರ ಸರ್ಕಾರದ ಹೊಸ ಪ್ರಯೋಗವೋ? ಎನ್ನುವುದನ್ನು ನರೇಂದ್ರ ಮೋದಿ ಅವರೇ ಸ್ಪಷ್ಟಪಡಿಸಬೇಕು ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!