ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ನವದೆಹಲಿ ವಿಶ್ವವಿದ್ಯಾನಿಲಯದ ಧನಸಹಾಯ ಆಯೋಗದವರು ನಡೆಸಲಿರುವ ಕಿರಿಯ ಶಿಷ್ಯವೇತನ ಸಂಶೋಧಕರ ಸಹಾಯಕರ (ಜೆ.ಆರ್.ಎಫ್), ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ರಾಷ್ಟ್ರಮಟ್ಟದ ಅರ್ಹತಾ ಪರೀಕ್ಷೆ (ಯು.ಜಿ.ಸಿ-ನೆಟ್)ಗೆ ಮತ್ತು ರಾಜ್ಯ ಸರ್ಕಾರವು ನಡೆಸಲಿರುವ ರಾಜ್ಯ ಮಟ್ಟದ ಪದವಿ ಕಾಲೇಜು ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆ-ಸೆಟ್)ಗೆ 45 ದಿನಗಳ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಜೂನ್ 22 ರ ಒಳಗೆ ಮೈಸೂರಿನ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ಕಛೇರಿಯಲ್ಲಿ ಬೆಳಗ್ಗೆ 10 ರಿಂದ ಸಂಜೆ 5 ರ ವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0821-2515944 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕ.ರಾ.ಮು.ವಿ ಕುಲಸಚಿವರ ಕಚೇರಿ ಪ್ರಕಟಣೆ ತಿಳಿಸಿದೆ.