ಬೆಂಗಳೂರು: 2022-23ನೇ ಶೈಕ್ಷಣಿಕ ವರ್ಷಕ್ಕೆ ಸಂಬಂಧಿಸಿದಂತೆ ಪದವಿ, ಸ್ನಾತಕೋತ್ತರ ಕೋರ್ಸ್ಗಳಿಗೆ ಇಡೀ ರಾಜ್ಯಕ್ಕೆ ಅನ್ವಯಿಸುವ ಹಾಗೆ ಏಕರೂಪದ ವೇಳಾಪಟ್ಟಿಯನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ. ರಾಜ್ಯದ ಎಲ್ಲಾ ವಿಶ್ವವಿದ್ಯಾಲಯ ಮತ್ತು ಕಾಲೇಜುಗಳು ಇದನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ.
ಈ ಏಕರೂಪದ ಕಾರ್ಯಕ್ರಮ ಪಟ್ಟಿಯಂತೆ, ರಾಜ್ಯದ ಉದ್ದಗಲಕ್ಕೂ ಪದವಿ ತರಗತಿಗಳಿಗೆ ಜುಲೈ 11ರಿಂದ ಪ್ರವೇಶಾತಿ ಆರಂಭವಾಗಲಿದ್ದು, ಆಗಸ್ಟ್ 17ರಿಂದ 22ರ ನಡುವೆ ತರಗತಿಗಳು ಆರಂಭವಾಗಲಿವೆ. ಸ್ನಾತಕೋತ್ತರ ಕೋರ್ಸ್ಗಳಿಗೆ ಅಕ್ಟೋಬರ್ 15ರಿಂದ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದ್ದು, ನವೆಂಬರ್ 2ರಿಂದ 14ರ ನಡುವೆ ತರಗತಿಗಳಿಗೆ ಚಾಲನೆ ಸಿಗಲಿದೆ.