Saturday, September 5, 2026
Saturday, September 5, 2026

ಜುಲಾಯಿ 26 ರಿಂದ ಕಾಲೇಜು ಆರಂಭ

ಜುಲಾಯಿ 26 ರಿಂದ ಕಾಲೇಜು ಆರಂಭ

Date:

ಭಾನುವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ರಾಜ್ಯದಲ್ಲಿ ನಾಲ್ಕನೇ ಹಂತದ ಅಲ್ ಲಾಕ್, ನಿಯಮ ಸಡಿಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಚರ್ಚೆಗಳು ನಡೆದು ಕೆಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಉಪಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ್, ಸಚಿವರುಗಳಾದ ಆರ್. ಅಶೋಕ್, ಅರವಿಂದ ಲಿಂಬಾವಳಿ, ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಮಾರ್ಗಸೂಚಿ ಹೀಗಿದೆ:

* ಶೇ. 50 ರಷ್ಟು ಸಾಮರ್ಥ್ಯದೊಂದಿಗೆ ಸಿನೆಮಾ ಥಿಯೇಟರ್ ಕಾರ್ಯನಿರ್ವಹಣೆಗೆ ಅವಕಾಶ.

* ಜುಲಾಯಿ 26ರಿಂದ ಕಾಲೇಜುಗಳ (ಉನ್ನತ ಶಿಕ್ಷಣ ಮಾತ್ರ) ಪುನರಾರಂಭ. ಮೊದಲ ಡೋಸ್ ಕೊರೊನಾ ಲಸಿಕೆ ಪಡೆದಿರುವ ಬೋಧಕ-ಬೋಧಕೇತರರು ಹಾಗೂ ವಿದ್ಯಾರ್ಥಿಗಳಿಗೆ ಮಾತ್ರ ಆಫ್ ಲೈನ್ ತರಗತಿಗಳಿಗೆ ಹಾಜರಾಗಲು ಅನುಮತಿ.

* ಕೌಶಲಾಭಿವೃದ್ಧಿ ತರಬೇತಿ, ಇತರ ದೀರ್ಘಾವಧಿ ತಾಂತ್ರಿಕ ತರಬೇತಿ ಕೋರ್ಸುಗಳನ್ನು ನಡೆಸುವ ಸಂಸ್ಥೆಗಳಿಗೆ ತೆರೆಯಲು ಅನುಮತಿ. ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಕನಿಷ್ಠ ಒಂದು ಡೋಸ್ ಕೊರೊನಾ ಲಸಿಕೆ ಪಡೆದಿರಬೇಕು. ಇಲ್ಲದಿದ್ದರೆ ಸಂಸ್ಥೆಗೆ ಹಾಜರಾಗಲು ಅನುಮತಿ ಇರುವುದಿಲ್ಲ.

* ರಾತ್ರಿ ಕರ್ಫ್ಯೂ (ನೈಟ್ ಕರ್ಫ್ಯೂ) ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶ್ರೀ ಕೃಷ್ಣ ಮಠ: ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಅರ್ಘ್ಯ ಪ್ರದಾನ

ಉಡುಪಿ, ಸೆ.5: ಶ್ರೀ ಕೃಷ್ಣ ಜನ್ಮಾಷ್ಠಮಿಯ ಪ್ರಯುಕ್ತ ಶುಕ್ರವಾರ ಮಧ್ಯರಾತ್ರಿ ಚಂದ್ರೋದಯ...

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...
error: Content is protected !!