Wednesday, January 22, 2025
Wednesday, January 22, 2025

ರೋಡ್ಕುಂದ: ಬಾದಾಮಿ ಚಾಲುಕ್ಯ ಇಮ್ಮಡಿ ಕೀರ್ತಿವರ್ಮನ ಅಪ್ರಕಟಿತ ಶಾಸನ ಪತ್ತೆ

ರೋಡ್ಕುಂದ: ಬಾದಾಮಿ ಚಾಲುಕ್ಯ ಇಮ್ಮಡಿ ಕೀರ್ತಿವರ್ಮನ ಅಪ್ರಕಟಿತ ಶಾಸನ ಪತ್ತೆ

Date:

ಉಡುಪಿ, ಜ.7: ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ರೋಡ್ಕುಂದ ಗ್ರಾಮದಲ್ಲಿನ ಅಪ್ರಕಟಿತ ಶಾಸನವನ್ನು ಇತಿಹಾಸ ಮತ್ತು ಪುರಾತತ್ವ ಸಂಶೋಧನಾರ್ಥಿಗಳಾದ ಹೆಚ್. ಕಾಡಸಿದ್ದ ಮತ್ತು ಹೊನ್ನರವಲಿ ಪತ್ತೆ ಮಾಡಿದ್ದು, ಈ ಶಾಸನವನ್ನು ಓದುವಲ್ಲಿ ಎಸ್. ನಾಗರಾಜಪ್ಪ (ಮೈಸೂರಿನ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯ ಶಾಸನತಜ್ಞ), ಮಂದರ್ಕೆ ನಿತ್ಯಾನಂದ ಪೈ (ಭಾರತೀಯ ನಾಣ್ಯಶಾಸ್ತ್ರಜ್ಞ) ಹಾಗೂ ಶ್ರುತೇಶ್ ಆಚಾರ್ಯ ಮೂಡುಬೆಳ್ಳೆ ಸಹಕಾರ ನೀಡಿರುತ್ತಾರೆ.

ಸ್ವಸ್ತಿಶ್ರೀ ಎಂಬ ಶುಭಸೂಚಕದಿಂದ ಪ್ರಾರಂಭವಾಗುವ ಈ ಶಾಸನವನ್ನು 8ನೆಯ ಶತಮಾನದ ಕನ್ನಡ ಲಿಪಿ ಮತ್ತು ಭಾಷೆಯಲ್ಲಿ ಬರೆಯಲಾಗಿದ್ದು, 5 ಸಾಲುಗಳನ್ನು ಒಳಗೊಂಡಿದೆ.

ಶಾಸನದ ಮಹತ್ವ: ಬಾದಾಮಿ ಚಾಲುಕ್ಯ ದೊರೆ ಇಮ್ಮಡಿ ಕೀರ್ತಿವರ್ಮನ ಆಳ್ವಿಕೆಯಲ್ಲಿ (ಸಾ.ಶ.ವ 744-757) ಪ್ರಾಯಶಃ ಮಗೆಯರ ಕುಲಕ್ಕೆ ಸೇರಿದ ಬಿಜಕಾರಿ ಎಂಬುವವನು ಸಾಲಿಗುನ್ದೆ (ಪ್ರಸ್ತುತ ಸಾಲುಗುಂದ) ಗ್ರಾಮವನ್ನು ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಗೆದ್ದು, ಸತ್ತ ವಿಷಯವನ್ನು ಶಾಸನವು ತಿಳಿಸುತ್ತದೆ. ರೋಡ್ಕುಂದ ಗ್ರಾಮದಲ್ಲಿ ಬಾದಾಮಿ‌ ಚಾಲುಕ್ಯ ಇಮ್ಮಡಿ ಕೀರ್ತಿವರ್ಮನ ಉಲ್ಲೇಖವಿರುವ ಪ್ರಥಮ ಶಾಸನ ಇದಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!