ಯಲ್ಲಾಪುರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ ಹಾಗೂ ಅತಿವೃಷ್ಟಿಯಿಂದ ಯಲ್ಲಾಪುರ ತಾಲೂಕಿನ ವಿವಿಧ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದೇ ಸಂದರ್ಭದಲ್ಲಿ ಯಲ್ಲಾಪುರ ತಾಲೂಕು ಆಸ್ಪತ್ರೆಗೆ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳ ಜೊತೆಗೆ ಕೋವಿಡ್-19 ಲಸಿಕೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶೀಲನೆ ನಡೆಸಿದರು. ಮಾಜಿ ಸಚಿವ ಶಿವರಾಮ ಹೆಬ್ಬಾರ್, ಜಿಲ್ಲಾಧಿಕಾರಿಗಳು, ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.