ಬೆಂಗಳೂರು: ಮಕ್ಕಳ ಕಲಿಕೆ ಮತ್ತು ಭವಿಷ್ಯದ ಹಿತದೃಷ್ಟಿಯಿಂದ ಶಾಲೆಗಳನ್ನು ಆದಷ್ಟು ಶೀಘ್ರವಾಗಿ ಪುನರಾರಂಭಗೊಳಿಸುವ ನಿಟ್ಟಿನಲ್ಲಿ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ ಶಿಕ್ಷಕರು ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಆದ್ಯತೆಯ ಮೇರೆಗೆ ಕೊರೊನಾ ಲಸಿಕೆ ನೀಡಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ಹೇಳಿದ್ದಾರೆ.
ಅರ್ಹ ಫಲಾನುಭವಿಗಳ ಪಟ್ಟಿ ಸಿದ್ಧಪಡಿಸಿ, ಕ್ರಿಯಾಯೋಜನೆ ರೂಪಿಸಲು ಆರೋಗ್ಯ ಇಲಾಖೆಯು ಶಿಕ್ಷಣ ಇಲಾಖೆ ಮತ್ತು ಜಿಲ್ಲಾಡಳಿತಗಳ ಜೊತೆಗೆ ಸಮನ್ವಯದೊಂದಿಗೆ ಕಾರ್ಯೋನ್ಮುಖವಾಗಲಿದೆ. ಫಲಾನುಭವಿಗಳ ಸಂಖ್ಯೆ ಮತ್ತು ಲಸಿಕೆಯ ಲಭ್ಯತೆ ಆಧರಿಸಿ ಆಯಾ ಶಾಲೆಗಳಲ್ಲಿ ಲಸಿಕಾ ಶಿಬಿರವನ್ನು ಆಯೋಜಿಸಲಾಗುವುದು ಎಂದು ಸಚಿವ ಸುಧಾಕರ್ ಹೇಳಿದರು.