Sunday, January 19, 2025
Sunday, January 19, 2025

ಮಹಿಳಾ ಪೌರ ಕಾರ್ಮಿಕರ ಪಾದಪೂಜೆ

ಮಹಿಳಾ ಪೌರ ಕಾರ್ಮಿಕರ ಪಾದಪೂಜೆ

Date:

ತುಮಕೂರು, ಅ.12: ತುಮಕೂರಿನ ಚಿಕ್ಕನಾಯಕನಹಳ್ಳಿ ಪಟ್ಟಣದ ಶಕ್ತಿ ಮಾತೆ ಶ್ರೀ ಮಹಾಲಕ್ಷ್ಮೀ ಮದ್ದರ ಲಕ್ಕಮ್ಮ ಅಮ್ಮನವರ ಸನ್ನಿಧಿಯಲ್ಲಿ ಶರನ್ನವರಾತ್ರಿ ಅಂಗವಾಗಿ ವಿಜಯದಶಮಿ ದಿನದಂದು ಸ್ವಚ್ಛತೆಯೇ ಸೇವೆ ಎಂಬ ಧ್ಯೇಯ ವಾಕ್ಯದೊಂದಿಗೆ ಪಟ್ಟಣದ ಪುರಸಭೆಯ ಮಹಿಳಾ ಪೌರ ಕಾರ್ಮಿಕರ ಪಾದಪೂಜೆಯನ್ನು ದೇವಸ್ಥಾನದ ಮುಖ್ಯಸ್ಥರಾದ ಲಕ್ಷ್ಮೀಶ್ ರವರು ನೆರವೇರಿಸಿದರು. ಅಕ್ಷತ ಲಕ್ಷ್ಮೀಶ್, ನಾಗರತ್ನ ರಂಗಸ್ವಾಮಿ ಮಂಗಳ ದ್ರವ್ಯಗಳನ್ನು ವಸ್ತ್ರ ನೀಡಿ ಗೌರವ ಸಲ್ಲಿಸಿದರು, ನಂತರ ಕೌಮಾರಿ ಪೂಜೆ ಹತ್ತು ವರ್ಷದ ಒಳಗಿನ ಹೆಣ್ಣು ಮಕ್ಕಳಿಗೂ ಸಹ ಪಾದ ಪೂಜೆ ಮಾಡಲಾಯಿತು. ನಂತರ ಶಮಿ ಪೂಜೆ, ಕದಲಿ ವೃಕ್ಷ ಛೇದನ, ಬನ್ನಿ ಪ್ರಸಾದ ನೀಡಲಾಯಿತು.

ದೇವಾಲಯದ ಧರ್ಮದರ್ಶಿಗಳಾದ ರಂಗಸ್ವಾಮಿ ಸಿ. ಎನ್ ರವರು ಧಾರ್ಮಿಕ ವಿಧಿ ವಿಧಾನ ನೆರವೇರಿಸಿದರು. ರಂಗರಾಜು, ಮೋಹಿತ್, ಮನೋಜ್, ಯೋಗ ಗುರುಗಳಾದ ಚರಣ್, ಕುಮಾರ್, ರಾಜಶೇಖರ್ ಪೋಚ್ಕಟ್ಟೆ, ಚರಣ್ ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು. ಭಕ್ತರಿಗೆ ಅನ್ನಸಂರ್ಪಣೆ ಏರ್ಪಡಿಸಲಾಗಿತ್ತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!