Tuesday, January 28, 2025
Tuesday, January 28, 2025

ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ: ಮುಖ್ಯಮಂತ್ರಿ ಸಿದ್ಧರಾಮಯ್ಯ

Date:

ಶಿವಮೊಗ್ಗ, ಜ.13: ಚುನಾವಣಾ ಪೂರ್ಣ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಶಿವಮೊಗ್ಗದಲ್ಲಿ ‘ಯುವನಿಧಿ’ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರ ಜನ್ಮದಿನದಂದೇ, ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ..

ಮೊದಲ ಗ್ಯಾರಂಟಿ ಶಕ್ತಿ ಯೋಜನೆಯಿಂದಾಗಿ ಮಹಿಳೆಯರು, ಯುವತಿಯರು 130 ಕೋಟಿ 28 ಲಕ್ಷ ಉಚಿತ ಟಿಕೇಟ್ ಪಡೆದು ಪ್ರಯಾಣ ಮಾಡಿದ್ದಾರೆ. 1 ಕೋಟಿ 65 ಲಕ್ಷ ಕುಟುಂಬಗಳಿಗೆ ಉಚಿತವಾಗಿ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಈ ಕೋಟಿ ಕುಟುಂಬಗಳು ನಯಾಪೈಸೆ ವಿದ್ಯುತ್ ಬಿಲ್ ಕಟ್ಟುವ ಹಾಗಿಲ್ಲ. ಇದೇ ರೀತಿ 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿಯ ಬದಲಿಗೆ ಹಣವನ್ನು ಪ್ರತೀ ಕುಟುಂಬಗಳಿಗೆ ಕೊಡುತ್ತಿದ್ದೇವೆ. 1 ಕೋಟಿ 17 ಲಕ್ಷ ಮಹಿಳೆಯರಿಗೆ, ಯುವತಿಯರಿಗೆ ಪ್ರತೀ ತಿಂಗಳು 2,000 ರೂ ತಲುಪಿಸುತ್ತಿದ್ದೇವೆ‌. ಇಂಥಹ ಸಾಧನೆ ಹಿಂದೆ ಯಾವ ಕಾಲದಲ್ಲೂ ಆಗಿಲ್ಲ. ಇದನ್ನೆಲ್ಲಾ ಮಾಡಿದ್ದು ನಾವು. ನಮ್ಮದು ನುಡಿದಂತೆ ಮಾಡಿ ತೋರಿಸಿದ ಸರ್ಕಾರ. ಇದೀಗ ಯುವನಿಧಿ ಜಾರಿ ಮಾಡಿದ್ದೇವೆ. ಯುವಕ ಯುವತಿಯರಿಗೆ ಹಣದ ಜತೆಗೆ ಉದ್ಯೋಗ ಪಡೆದುಕೊಳ್ಳಲು ಅಗತ್ಯವಾದ ಕೌಶಲ್ಯ ತರಬೇತಿಯನ್ನೂ ನೀಡಿ ಅವರಿಗೆ ಉದ್ಯೋಗ ಕೊಡಿಸುವ ದಿಕ್ಕಿನಲ್ಲಿ ನಮ್ಮ ಪ್ರಯತ್ನ ಮುಂದುವರೆಯಲಿದೆ. ಈಗಾಗಲೇ 70 ಸಾವಿರ ಯುವಕ – ಯುವತಿಯರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ‌. ಪ್ರತಿ ನಿರುದ್ಯೋಗಿ ಯುವಕ ಯುವತಿಯರು ಯೋಜನೆಗೆ ನೋಂದಾಯಿಸಿಕೊಂಡು ಅನುಕೂಲ ಪಡೆದುಕೊಳ್ಳಬೇಕು ಎಂದು ಹೇಳಿದರು.

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಪರಿಶಿಷ್ಟ ಪಂಗಡಗಳ ಕಲ್ಯಾಣ, ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್, ಇಂಧನ ಸಚಿವ ಕೆ.ಜೆ. ಜಾರ್ಜ್, ಪ್ರಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವರಾದ ಬಿ. ನಾಗೇಂದ್ರ, ಮೀನುಗಾರಿಕಾ ಸಚಿವ ಮಾಂಕಳ ವೈದ್ಯ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಕೆ. ಗೋವಿಂದರಾಜು, ಸಂಸದ ಬಿ.ವೈ. ರಾಘವೇಂದ್ರ, ಶಾಸಕರಾದ ಭೀಮಣ್ಣ ನಾಯಕ್, ಸಂಗಮೇಶ್, ತಮ್ಮಯ್ಯ, ಬೇಳೂರು ಗೋಪಾಲಕೃಷ್ಣ, ರಾಜೇಗೌಡ, ಶಾರದಾ ಪೂರ್ಯಾನಾಯಕ, ಚನ್ನಬಸಪ್ಪ, ತರೀಕೆರೆ ಶ್ರೀನಿವಾಸ್, ಅರುಣ್ ಕುಮಾರ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜ. 29: ಕಿನ್ನಿಮೂಲ್ಕಿಯಲ್ಲಿ ನೇರ ಸಂದರ್ಶನ

ಉಡುಪಿ, ಜ.27: ಜನವರಿ 29 ರಂದು ಬೆಳಗ್ಗೆ 10.30 ಕ್ಕೆ ನಗರದ...

ಫೆ. 19: ಅಜ್ಜರಕಾಡು ಕಾಲೇಜಿನಲ್ಲಿ ಜಿಲ್ಲಾಮಟ್ಟದ ಕೌಶಲ್ಯ ರೋಜ್‌ಗಾರ್ ಮೇಳ

ಉಡುಪಿ, ಜ.27: ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ (ಕೆ.ಎಸ್.ಡಿ.ಸಿ) ಬೆಂಗಳೂರು, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ...

ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆ: ವಾರ್ಷಿಕ ಭಜನಾ ಮಂಗಲೋತ್ಸವ

ಕಾರ್ಕಳ, ಜ.27: ಶ್ರೀ ಲಕ್ಷ್ಮೀ ಜನಾರ್ದನ ಭಜನಾ ಮಂಡಳಿ ಎಳ್ಳಾರೆಯ 7ನೇ...

ಮುಡಾ: ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ನಿಗೆ ಮತ್ತು ಸಚಿವ ಭೈರತಿ ಸುರೇಶ್ ಅವರಿಗೆ ಇಡಿ ನೋಟಿಸ್

ಬೆಂಗಳೂರು, ಜ.27: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ಭೂ ಮಂಜೂರಾತಿಗೆ ಸಂಬಂಧಿಸಿದ...
error: Content is protected !!