Friday, September 4, 2026
Friday, September 4, 2026

ನೆಹರೂರವರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ನೆಹರೂರವರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಬೆಂಗಳೂರು, ಮೇ 27: ನೆಹರೂ ಅವರು ದೇಶಕ್ಕೆ ಸ್ವಾತಂತ್ರ್ಯ ಬಂದ ನಂತರದ ಮೊದಲ ಪ್ರಧಾನಮಂತ್ರಿಗಳಾಗಿ 17 ವರ್ಷಗಳ ಕಾಲ ಜನರ ಸೇವೆ ಮಾಡಿದ್ದಾರೆ. ಸಮಾಜವಾದಿ ಮತ್ತು ಮಿಶ್ರ ಆರ್ಥಿಕತೆಗೆ ಹೆಚ್ಚು ಒತ್ತು ನೀಡಿ, ಬೃಹತ್ ಅಣೆಕಟ್ಟುಗಳ ನಿರ್ಮಾಣ, ಶಿಕ್ಷಣ, ಸಹಕಾರ ಕ್ಷೇತ್ರಗಳಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ನೆಹರೂ ಕಾರಣಕರ್ತರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಜವಾಹರಲಾಲ್ ನೆಹರೂ ಅವರ ಪುಣ್ಯಸ್ಮರಣೆಯ ಅಂಗವಾಗಿ ಬುಧವಾರ ವಿಧಾನಸೌಧ ಆವರಣದಲ್ಲಿರುವ ನೆಹರೂರವರ ಪುತ್ಥಳಿ ಬಳಿ‌ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ, ಗೌರವ ನಮನ ಸಲ್ಲಿಸಿ ಅವರು ಮಾತನಾಡಿದರು.

ಪಂಚವಾರ್ಷಿಕ ಯೋಜನೆಗಳನ್ನು ರೂಪಿಸಿ ದೇಶದ ಪ್ರಗತಿಯನ್ನು ವೈಜ್ಞಾನಿಕವಾಗಿ ಸಾಧಿಸುವ ಪ್ರಯತ್ನ ಮಾಡಿದ್ದರು. ಅವರು ಅಗಲಿ 62 ವರ್ಷಗಳಾಗಿವೆ. ಈ ಸಂದರ್ಭದಲ್ಲಿ ನೆಹರೂರವರನ್ನು ಸ್ಮರಿಸಿ, ಅವರ ಹಾದಿಯಲ್ಲಿ ನಡೆಯುವ ಪ್ರಾಮಾಣಿಕ ಪ್ರಯತ್ನವನ್ನು ಮಾಡುತ್ತೇವೆ. ಅವರ ಆದರ್ಶಗಳು ಸದಾ ಮೇಲ್ಪಂಕ್ತಿಯಲ್ಲಿವೆ.

ಸಚಿವರಾದ ಹೆಚ್.ಸಿ.ಮಹದೇವಪ್ಪ, ಜಮೀರ್ ಅಹ್ಮದ್ ಖಾನ್, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ. ಶಾಲಿನಿ‌ ರಜನೀಶ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ನಾವುಂದ ಸರಕಾರಿ ಪದವಿಪೂರ್ವ ಕಾಲೇಜಿಗೆ ಅವಳಿ ಪ್ರಶಸ್ತಿ

ಉಡುಪಿ, ಸೆ.4: ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಮತ್ತು ಸರಕಾರಿ...

ರಥಬೀದಿ ಕಾಲೇಜು: ಸಂಸ್ಕೃತ ದಿನಾಚರಣೆ

ಮಂಗಳೂರು, ಸೆ.3: ರಥಬೀದಿ ಕಾಲೇಜಿನಲ್ಲಿ ಸಂಸ್ಕೃತ ದಿನಾಚರಣೆ ಕಾರ್ಯಕ್ರಮ ಮಂಗಳೂರು ರಥಬೀದಿಯ...

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕಾಗಿ ಸಹಾಯಧನ: ಅರ್ಜಿ ಆಹ್ವಾನ

ಉಡುಪಿ, ಸೆ.4: ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ...

ಪಡುಕರೆ: ಮುದ್ದುಕೃಷ್ಣ ವೇಷ ಸ್ಪರ್ಧೆ ಸಂಪನ್ನ

ಪಡುಕರೆ, ಸೆ.4: ಶ್ರೀ ಕೃಷ್ಣ ಮಾರುತಿ ವ್ಯಾಯಾಮ ಶಾಲೆ, ಕಡೆಕಾರು ಪಡುಕರೆ...
error: Content is protected !!