Home ಸುದ್ಧಿಗಳು ರಾಜ್ಯ ರಾಜ್ಯದಲ್ಲಿ ಮತ್ತೊಮ್ಮೆ ವೀಕೆಂಡ್ ಕರ್ಫ್ಯೂ ಜಾರಿ

ರಾಜ್ಯದಲ್ಲಿ ಮತ್ತೊಮ್ಮೆ ವೀಕೆಂಡ್ ಕರ್ಫ್ಯೂ ಜಾರಿ

1022
0

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಪಾಸಿಟಿವಿಟಿ ಪ್ರಮಾಣವೂ ಏರಿಕೆ ಕಂಡಿದೆ. ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಟಾಸ್ಕ್ ಫೋರ್ಸ್ ಸಭೆಯ ನಂತರ ಸಚಿವರಾದ ಡಾ. ಸುಧಾಕರ್ ಮತ್ತು ಆರ್ ಅಶೋಕ್ ಸುದ್ಧಿಗಾರರೊಂದಿಗೆ ಮಾತನಾಡಿ ಮಾಹಿತಿ ನೀಡಿದರು. ರಾಜ್ಯಾದ್ಯಂತ ಶುಕ್ರವಾರದಿಂದ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ.

* ನೈಟ್ ಕರ್ಫ್ಯೂ ಮುಂದುವರಿಯಲಿದೆ.

*  ಎಲ್ಲಾ ಕಚೇರಿಗಳು ವಾರದಲ್ಲಿ 5 ದಿನ ಕಾರ್ಯನಿರ್ವಹಿಸಲಿದೆ. (ಸೋಮವಾರದಿಂದ ಶುಕ್ರವಾರ)

*  ಶುಕ್ರವಾರ ರಾತ್ರಿ 10 ಗಂಟೆಯಿಂದ ಸೋಮವಾರ ಬೆಳಿಗ್ಗೆ 5 ಗಂಟೆಯವರೆಗೆ ವೀಕೆಂಡ್ ಕರ್ಫ್ಯೂ (ವಾರಾಂತ್ಯ ಕರ್ಫ್ಯೂ) ಜಾರಿ.

*  ಬೆಂಗಳೂರು ನಗರದಲ್ಲಿ ಎಲ್ಲಾ ಶಾಲಾ ಕಾಲೇಜುಗಳು (10ನೇ ತರಗತಿ, 11, 12ನೇ ತರಗತಿ, ಮೆಡಿಕಲ್, ಪ್ಯಾರಾ ಮೆಡಿಕಲ್ ಹೊರತುಪಡಿಸಿ) ಜನವರಿ 6ರಿಂದ ಬಂದ್.

*  ಪಬ್, ಬಾರ್, ಹೊಟೇಲ್, ರೆಸ್ಟೋರೆಂಟ್, ಕ್ಲಬ್, ಉಪಹಾರ ಗೃಹಗಳು ಆಸನದ ಶೇಕಡ 50 ರಷ್ಟು ಸಾಮರ್ಥ್ಯದೊಂದಿಗೆ ಕೋವಿಡ್ ಮಾರ್ಗಸೂಚಿಗಳ ಅನ್ವಯ ಕಾರ್ಯನಿರ್ವಹಿಸಲಿದೆ. ಲಸಿಕೆ ಪಡೆದವರಿಗೆ ಮಾತ್ರ ಅವಕಾಶ.

*  ಸಿನೆಮಾ, ಮಲ್ಟಿಪ್ಲೆಕ್ಸ್, ಈಜುಕೊಳ, ಜಿಮ್, ರಂಗಮಂದಿರ, ಆಡಿಟೊರಿಯಮ್ ಶೇಕಡ 50 ರಷ್ಟು ಸಾಮರ್ಥ್ಯದೊಂದಿಗೆ ಕಾರ್ಯನಿರ್ವಹಿಸಬೇಕು.

*  ಮದುವೆ ಸಮಾರಂಭ ಹೊರಾಂಗಣ 200, ಒಳಾಂಗಣ 100 ಮಂದಿಗೆ ಮಾತ್ರ ಅವಕಾಶ.

*  ಧಾರ್ಮಿಕ ಕೇಂದ್ರಗಳಲ್ಲಿ ದರ್ಶನಕ್ಕೆ ಮಾತ್ರ ಅವಕಾಶ. ಯಾವುದೇ ಸೇವೆಗಳಿಗೆ ಅವಕಾಶವಿಲ್ಲ.

*  ಮಾಲ್, ಶಾಪಿಂಗ್ ಕಾಂಪ್ಲೆಕ್ಸ್, ಅಂಗಡಿ ಮುಂಗಟ್ಟುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ.

*  ಎಲ್ಲಾ ರೇಲಿ, ಧರಣಿ, ಪ್ರತಿಭಟನಾ ಸಭೆ, ಮೆರವಣಿಗೆ ನಿಷೇಧಿಸಲಾಗಿದೆ.

*  ಕೇರಳ, ಗೋವಾ, ಮಹಾರಾಷ್ಟ್ರ ಗಡಿ ಜಿಲ್ಲೆಗಳಲ್ಲಿ ಕಟ್ಟುನಿಟ್ಟಿನ ತಪಾಸಣೆ.

* ವೀಕೆಂಡ್ ಕರ್ಫ್ಯೂ ವೇಳೆ ಹಾಲು, ತರಕಾರಿ, ದಿನಸಿ, ಮಾಂಸದ ಅಂಗಡಿ ತೆರೆಯಲು ಅನುಮತಿ ನೀಡಲಾಗಿದೆ. ಹೋಟೆಲ್‍ಗಳಲ್ಲಿ ಪಾರ್ಸೆಲ್‍ಗಳಿಗೆ ಮಾತ್ರ ಅನುಮತಿ.

 

 

 

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.