Saturday, January 17, 2026
Saturday, January 17, 2026

ಜನಿವಾರಕ್ಕೂ ಸಿಇಟಿ ಪರೀಕ್ಷೆಗೂ ಏನು ಸಂಬಂಧ? ಈ ಘಟನೆ ಹಿಂದೂ ಸಂಪ್ರದಾಯದ ಆಚಾರ ವಿಚಾರಕ್ಕೆ ನಡೆಸಿದ ಅಪಮಾನ: ಬಿ.ವೈ.ವಿಜಯೇಂದ್ರ

ಜನಿವಾರಕ್ಕೂ ಸಿಇಟಿ ಪರೀಕ್ಷೆಗೂ ಏನು ಸಂಬಂಧ? ಈ ಘಟನೆ ಹಿಂದೂ ಸಂಪ್ರದಾಯದ ಆಚಾರ ವಿಚಾರಕ್ಕೆ ನಡೆಸಿದ ಅಪಮಾನ: ಬಿ.ವೈ.ವಿಜಯೇಂದ್ರ

Date:

ಬೆಂಗಳೂರು, ಏ.20: ಬೀದರ್ ನಲ್ಲಿ ಜನಿವಾರ ಧರಿಸಿದ್ದ ವಿದ್ಯಾರ್ಥಿಗೆ ಸಿಇಟಿ ಪರೀಕ್ಷೆಗೆ ಅವಕಾಶ ಕೊಡದೇ, ಶಿವಮೊಗ್ಗದಲ್ಲಿ ವಿದ್ಯಾರ್ಥಿಯೊಬ್ಬನ ಜನಿವಾರ ಕಿತ್ತೆಸೆಯಲು ದರ್ಪ ಮೆರೆದು ವಿದ್ಯಾರ್ಥಿಯ ಭವಿಷ್ಯಕ್ಕೆ ಕಲ್ಲು ಹಾಕಿದ ಅಧಿಕಾರಿ, ಸಿಬ್ಬಂದಿಗಳ ವರ್ತನೆ ಅತ್ಯಂತ ಹೇಯ. ಈ ರೀತಿಯ ಬೌದ್ಧಿಕ ವಿಕೃತಿ ಹಾಗೂ ಮನುಷ್ಯತ್ವ ಇಲ್ಲದ ನಡೆ ಇನ್ನೊಂದಿರಲಾರದು, ಇದು ಕಾಂಗ್ರೆಸ್ ಸರ್ಕಾರದ ಹೀನ ಮನಸ್ಥಿತಿಯ ಮುಖವಾಡವನ್ನು ಪ್ರದರ್ಶಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಬಾಲ್ಯದಿಂದಲೂ ಕನಸು ಕಟ್ಟಿಕೊಂಡು ಭವಿಷ್ಯದ ತಿರುವಿನಲ್ಲಿ ಆಘಾತ ಎದುರಿಸಿ ವಿದ್ಯಾರ್ಥಿಯೊಬ್ಬನ ಇಂಜಿನಿಯರಿಂಗ್ ಪದವಿಯ ಕನಸಿನ ಮೇಲೆ ಅಟ್ಟಹಾಸಗೈದ ಸಿಇಟಿ ಪರೀಕ್ಷಾ ಸಿಬ್ಬಂದಿಯ ವರ್ತನೆ ಅತ್ಯಂತ ಖಂಡನೀಯ. ಪರೀಕ್ಷೆ ಹಾಗೂ ಸಂದರ್ಶನ ಎದುರಿಸುವ ವೇಳೆ ಕೆಲ ವಸ್ತುಗಳನ್ನು ಕೊಂಡೊಯ್ಯುವುದು ನಿಷಿದ್ಧ, ಆದರೆ ಜನಿವಾರ ತೊಡುವುದು ಒಂದು ಕುಟುಂಬ ಹಾಗೂ ಭಾರತೀಯ ಸಮುದಾಯದ ಆಚಾರ ವಿಚಾರಕ್ಕೆ ಸಂಬಂಧಿಸಿದ್ದು, ವಿದ್ಯಾರ್ಥಿ ಬರೆಯುವ ಪರೀಕ್ಷೆಯ ಮೇಲೆ ಜನಿವಾರ ಏನು ಪ್ರಭಾವ ಅಥವಾ ಪರಿಣಾಮ ಬೀರುತ್ತದೆ? ಎಂಬುದಕ್ಕೆ ಸಂಬಂಧಿಸಿದ ಸಚಿವರು ಹಾಗೂ ಸರ್ಕಾರ ಉತ್ತರಿಸಬೇಕು. ಶಿಕ್ಷಣವೆಂದರೆ ಸಂಸ್ಕಾರ, ಅದು ಇಲ್ಲದವರು ಶಿಕ್ಷಣ ಖಾತೆಯನ್ನು ನಿರ್ವಹಿಸಿದರೆ ಏನು ಪರಿಣಾಮ ಬೀರಬಹುದು ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.

ಈ ಸಂಬಂಧವಾಗಿ ವಿದ್ಯಾರ್ಥಿಯ ಭವಿಷ್ಯಕ್ಕೆ ಕಲ್ಲು ಹಾಕಿ ಹಿಂದೂ ಸಂಪ್ರದಾಯದ ಆಚಾರ ವಿಚಾರವನ್ನು ಅಪಮಾನಿಸಿರುವ ಅಧಿಕಾರಿಗಳ ವಿರುದ್ಧ ಮುಖ್ಯಮಂತ್ರಿಗಳು ಕ್ರಮ ತೆಗೆದುಕೊಳ್ಳಲು ಮುಂದಾಗಲಿ. ಸನಾತನ ಹಿಂದೂ ಧರ್ಮದ ಆಚಾರ ವಿಚಾರಗಳಿಗೆ ಮಾರ್ಗದರ್ಶನ ತೋರುವ ಸಭ್ಯ ಬ್ರಾಹ್ಮಣ ಸಮುದಾಯವನ್ನು ಅಪಮಾನಿಸಿದಕ್ಕೆ ಈ ಕೂಡಲೇ ಬೇಷರತ್ ಕ್ಷಮೆಯಾಚಿಸಲಿ ಎಂದು ವಿಜಯೇಂದ್ರ ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!