Sunday, January 19, 2025
Sunday, January 19, 2025

ಕಾನೂನು ಹೋರಾಟದ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

ಕಾನೂನು ಹೋರಾಟದ ಬಗ್ಗೆ ತಜ್ಞರೊಂದಿಗೆ ಚರ್ಚೆ ಮಾಡಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು, ಸೆ.24: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಎನ್‌ಎಸ್‌ಎಸ್ 218ರ ಹಾಗೂ ಪಿಸಿ ಕಾಯ್ದೆ 19ರಂತೆ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವುದನ್ನು ತಿರಸ್ಕರಿಸಿ, ಪಿಸಿ ಕಾಯ್ದೆಯ 17ಎ ಪ್ರಕಾರ ತನಿಖೆಗೆ ಉಚ್ಛನ್ಯಾಯಾಲಯ ಆದೇಶ ನೀಡಿದೆ. ಈ ತೀರ್ಪಿನ ಮೇಲೆ ಮುಂದಿನ ಕಾನೂನು ಹೋರಾಟದ ಬಗ್ಗೆ ಕಾನೂನು ತಜ್ಞರೊಂದಿಗೆ ಚರ್ಚೆ ಮಾಡಿ, ತೀರ್ಮಾನ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಾನು ತಪ್ಪು ಮಾಡಿಲ್ಲ. 17ಎ ರಡಿ ತನಿಖೆ ಮಾಡಲು ಆದೇಶ ನೀಡಿದ ಮಾತ್ರಕ್ಕೆ ನಾನು ತಪ್ಪು ಮಾಡಿದ್ದೇನೆ ಎಂದಲ್ಲ. ಇಡೀ ದೇಶದಲ್ಲಿ ವಿಪಕ್ಷಗಳ ಸರ್ಕಾರದ ಮೇಲೆ ಪಿತೂರಿ ಮಾಡಿದಂತೆ ಕರ್ನಾಟಕದಲ್ಲಿಯೂ ನನ್ನ ಹಾಗೂ ನಮ್ಮ ಸರ್ಕಾರದ ವಿರುದ್ಧ ಪಿತೂರಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಖಂಡಿತಾ ನನಗೆ ಜಯ ಸಿಗಲಿದೆ. ಬಿಜೆಪಿಯವರನ್ನು ನಾವು ರಾಜಕೀಯವಾಗಿ ಎದುರಿಸುತ್ತೇವೆ. ಬಿಜೆಪಿ ಹೇಳಿದ ಮಾತ್ರಕ್ಕೆ ನಾನು ರಾಜೀನಾಮೆ ಏಕೆ ಕೊಡಬೇಕು? ಕೇಂದ್ರ ಸಚಿವ ಕುಮಾರಸ್ವಾಮಿ ಅವರ ಮೇಲೆ ಎಫ್.ಐ.ಆರ್ ಆಗಿದ್ದು, ಅವರು ಜಾಮೀನಿನ ಮೇಲೆ ಇದ್ದಾರೆ. ಅವರು ರಾಜೀನಾಮೆ ಕೊಟ್ಟಿದ್ದಾರೆಯೇ? ಇದು ಅವರಿಗೆ ಅನ್ವಯವಾಗುವುದಿಲ್ಲವೇ? ತನಿಖೆ ಹಂತದಲ್ಲಿಯೇ ರಾಜೀನಾಮೆ ಕೊಡಬೇಕು ಎನ್ನುವ ಬಿಜೆಪಿ ವಾದಕ್ಕೆ ಕುಮಾರಸ್ವಾಮಿ ಅವರ ಪ್ರತಿಕ್ರಿಯೆ ಏನೆಂದು ಕೇಳಿ ತಿಳಿಯಿರಿ ಎಂದು ಸಿಎಂ ಹೇಳಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!