Saturday, September 26, 2026
Saturday, September 26, 2026

ನಾರಿ ಶಕ್ತಿ ಈ ದೇಶದ ಶಕ್ತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ನಾರಿ ಶಕ್ತಿ ಈ ದೇಶದ ಶಕ್ತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

Date:

ಬೆಂಗಳೂರು, ಜು.8: ಬಸವಕಲ್ಯಾಣದ ಬಸವ ಮಹಾಮನೆಯಲ್ಲಿ ‘ಅಕ್ಕಪಡೆ’ – ಮಹಿಳೆಯರ ಶಕ್ತಿ ಪ್ರದರ್ಶನ ಮತ್ತು ಆತ್ಮರಕ್ಷಣಾ ಕಾರ್ಯಕ್ರಮ ನಡೆಯಿತು. ಮಹಿಳಾ ಸಿಬ್ಬಂದಿಯ ಆತ್ಮರಕ್ಷಣೆಯ ಸಾಹಸ, ಕರಾಟೆ, ಲಾಠಿಪ್ರಹಾರ, ಕೌಶಲ್ಯ ಪ್ರದರ್ಶನವನ್ನು ವೀಕ್ಷಿಸಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮಾತನಾಡುತ್ತಾ, ಹೆಣ್ಣು ಅಂದ್ರೆ ಭೂಮಿ, ಹೆಣ್ಣು ಅಂದ್ರೆ ಧೈರ್ಯ, ಹೆಣ್ಣು ಅಂದ್ರೆ ಭರವಸೆ, ಹೆಣ್ಣು ಅಂದ್ರೆ ಶಕ್ತಿ, ಹೆಣ್ಣು ಅಂದ್ರೆ ಬೆಳಕು. ಈ ಬೆಳಕು ಇಂದು ಪ್ರತಿ ಕುಟುಂಬವನ್ನೂ ಬೆಳಗುತ್ತಿದೆ. ನಾರಿ ಶಕ್ತಿ ಈ ದೇಶದ ಶಕ್ತಿಯಾಗಿದೆ.

ರಾಜ್ಯದಲ್ಲಿ ಮಹಿಳೆಯರ ಸುರಕ್ಷತೆಗಾಗಿ ಅಕ್ಕಪಡೆ ತಯಾರಾಗಿದೆ. ಅಕ್ಕಪಡೆಗೆ ಸೇರಿರುವವರಿಗೆ ನನ್ನ ಹೃದಯಪೂರ್ವಕ ಅಭಿನಂದನೆಗಳು. ನಿಮ್ಮ ಹೋರಾಟ, ನಿಮ್ಮ ಶ್ರಮ, ನಿಮ್ಮ ಶಕ್ತಿ, ನಿಮ್ಮ ಧೈರ್ಯ, ನಿಮ್ಮ ಸಾಧನೆ ಎಲ್ಲದ್ದಕ್ಕೂ ಫಲ ಸಿಗುತ್ತದೆ. ರಾಜ್ಯದಲ್ಲಿ 10,000 ಅಕ್ಕಪಡೆಗಳನ್ನು ಸ್ಥಾಪಿಸಲು ಸರ್ಕಾರ ಆದೇಶ ಹೊರಡಿಸಿದೆ. ನಿಮ್ಮಲ್ಲಿರುವ ಸಾಹಸ ಹಾಗೂ ಕೌಶಲ್ಯಗಳನ್ನು ಹೊರತೆಗೆಯಲು ಅಕ್ಕಪಡೆ ಅನುಕೂಲವಾಗಲಿದೆ ಎಂದು ಸಿಎಂ ಹೇಳಿದರು.

ಉಪಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ್‌, ಸಚಿವರಾದ ಈಶ್ವರ್‌ ಖಂಡ್ರೆ, ಶರಣಪ್ರಕಾಶ್‌ ಪಾಟೀಲ್‌, ಶಾಸಕರಾದ ರಹೀಂ ಖಾನ್‌, ಸಂಸದರಾದ ಸಾಗರ ಖಂಡ್ರೆ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!