Tuesday, September 29, 2026
Tuesday, September 29, 2026

ಕಾರ್ಮಿಕರು ದೇಶದ ಅಭಿವೃದ್ಧಿಯ ಶಿಲ್ಪಿಗಳು: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಾರ್ಮಿಕರು ದೇಶದ ಅಭಿವೃದ್ಧಿಯ ಶಿಲ್ಪಿಗಳು: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಬೆಂಗಳೂರು, ಮೇ.1: ಕಾರ್ಮಿಕರು ದೇಶದ ಆರ್ಥಿಕ ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಶಿಲ್ಪಿಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ್ದ ವಿಶ್ವ ಕಾರ್ಮಿಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕಾಯಕವೇ ಕೈಲಾಸ ಎಂದು ಬಸವಣ್ಣ ಹೇಳಿದ್ದರು. ಯಾವುದೇ ಕೆಲಸ ಮಾಡಿದರೂ ಅದಕ್ಕೆ ಸಮಾನ ಗೌರವ ನೀಡಬೇಕು. ಕಾರ್ಮಿಕರು ದೇಶದ ಸಾಮಾಜಿಕ, ಆರ್ಥಿಕ ಅಭಿವೃದ್ಧಿಯ ಆಧಾರಸ್ತಂಭ. ದೇಶದಲ್ಲಿ 75% ಗಿಂತ ಹೆಚ್ಚು ಅಸಂಘಟಿತ ಕಾರ್ಮಿಕರಿದ್ದಾರೆ. ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದ್ದು, ಅವರನ್ನು ಗೌರವಿಸುತ್ತದೆ. ರಾಜ್ಯ ಸರ್ಕಾರ ಕಾರ್ಮಿಕರಿಗೆ ಅನೇಕ ಸೌಲಭ್ಯಗಳನ್ನು ನೀಡಿದೆ. ಕಾರ್ಮಿಕರು ಕೆಲಸದ ವೇಳೆ ಮೃತಪಟ್ಟರೆ ಅವರಿಗೆ ನೀಡುತ್ತಿದ್ದ 5 ಲಕ್ಷಗಳ ಪರಿಹಾರ ಮೊತ್ತವನ್ನು 8 ಲಕ್ಷಕ್ಕೆ ಹೆಚ್ಚಿಸಿದ್ದೇನೆ. ಸಹಜ ಮರಣ ಹೊಂದಿದವರ ಸಂಸ್ಕಾರಕ್ಕೆ ನೀಡುತ್ತಿದ್ದ 75 ಸಾವಿರ ರೂ.ಗಳನ್ನು ಒಂದೂವರೆ ಲಕ್ಷಕ್ಕೆ ಹೆಚ್ಚಿಸಲಾಗಿದೆ.

ಕರ್ನಾಟಕ ರಾಜ್ಯ ಗಿಗ್ ಕಾರ್ಮಿಕರ ವಿಮಾ ಯೋಜನೆಯಡಿ 30,256 ಗಿಗ್ ಕಾರ್ಮಿಕರನ್ನು ನೋಂದಾಯಿಸಲಾಗಿದ್ದು, ಅಪಘಾತದಲ್ಲಿ ಮರಣ ಹೊಂದಿವವರಿಗೆ 4 ಲಕ್ಷ ರೂ ಪರಿಹಾರ ನೀಡಲು ತೀರ್ಮಾನಿಸಿದ್ದೇವೆ. ಈಗಾಗಲೇ ಐದು ಪ್ರಕರಣಗಳಲ್ಲಿ ಪರಿಹಾರ ನೀಡಲಾಗಿದೆ. 2026-27 ಕ್ಕೆ ಶ್ರಮಿಕ ವರ್ಗಗಳ ಮಕ್ಕಳೂ ಉತ್ತಮ ಶಿಕ್ಷಣ ಪಡೆಯಬೇಕೆಂಬ ಉದ್ದೇಶದಿಂದ ಕಾರ್ಮಿಕರ ಮಕ್ಕಳಿಗೆ 104 ವಸತಿ ಶಾಲೆಗಳನ್ನು ತೆರೆಯಲಾಗಿದೆ. ವಸತಿ ಶಾಲೆಗಳಲ್ಲಿ 99.42% ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಾರ್ಮಿಕರ ಮಕ್ಕಳೂ ಉನ್ನತ ಶಿಕ್ಷಣ ಪಡೆಯಲು ಈ ಶಾಲೆಗಳು ನೆರವಾಗಲಿವೆ.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಜಾರಿಗೆ ತಂದ ಕಾನೂನುಗಳು ಕಾರ್ಮಿಕರ ಹಿತವನ್ನು ಕಾದಿವೆ. ಜಗಜೀವನ ರಾಮ್ ಅವರೂ ಕಾರ್ಮಿಕರ ಪರವಾಗಿ ಸಾಕಷ್ಟು ಕೆಲಸ ಮಾಡಿದ್ದರು. ಕಾಂಗ್ರೆಸ್ ಪಕ್ಷ ಕಾರ್ಮಿಕರ ಜೊತೆಗಿದೆ. ಎಂಟು ಗಂಟೆಗಳ ಕೆಲಸದ ಅವಧಿ, ಎಂಟು ಗಂಟೆಗಳ ವಿಶ್ರಾಂತಿ, ಎಂಟು ಗಂಟೆಗಳ ಕಾಲ ಮನೋರಂಜನೆ ಅಗತ್ಯವೆಂದು 1886 ರಲ್ಲಿ ಚಿಕಾಗೋದಲ್ಲಿ ನಡೆದ ಕಾರ್ಮಿಕರ ಸಂಘಟನೆಗಳ ಹೋರಾಟಗಾರರ ಬೇಡಿಕೆಯಾಗಿತ್ತು. ಅದಕ್ಕೂ ಮುನ್ನ 14 ರಿಂದ 18 ಗಂಟೆಗಳ ಕಾಲ ಕೆಲಸ ಮಾಡಬೇಕಿತ್ತು. ಕಾರ್ಮಿಕರ ಹೋರಾಟದ ದಿನವನ್ನೇ ವಿಶ್ವ ಕಾರ್ಮಿಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ದೇಶದ ಕಾರ್ಮಿಕ ಬಂಧುಗಳಿಗೆ ಕಾರ್ಮಿಕ ದಿನದ ಶುಭಾಶಯಗಳು ಎಂದು ಮುಖ್ಯಮಂತ್ರಿ ಹೇಳಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಡಾ.ಮಿಥುನ್ ಯು: ಆಂತರಿಕ ಗುಣಮಟ್ಟ ಭರವಸೆ ಕೋಶದ ಸದಸ್ಯರಾಗಿ ಆಯ್ಕೆ

ಉಡುಪಿ, ಸೆ.29: ಮಂಗಳೂರಿನ ಪ್ರತಿಷ್ಠಿತ ಎ. ಜೆ. ಇಂಜಿನಿಯರಿಂಗ್ ಮತ್ತು ತಂತ್ರಜ್ಞಾನ...

ರಾಷ್ಟ್ರೀಯ ಲೋಕ್ ಅದಾಲತ್: ಒಂದೇ ದಿನದಲ್ಲಿ ಒಟ್ಟು 61,367 ಪ್ರಕರಣ ಇತ್ಯರ್ಥ

ಉಡುಪಿ, ಸೆ.28: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು ಇವರ...

ಕೃಷಿ ಪ್ರವಾಸೋದ್ಯಮಕ್ಕೆ ಒತ್ತು ನೀಡಲು ಚಿಂತನೆ: ಸಿ.ಇ.ಓ ಪ್ರತೀಕ್ ಬಾಯಲ್

ಉಡುಪಿ, ಸೆ.28: ಜಿಲ್ಲೆಯ ನೈಸರ್ಗಿಕ ಸೌಂದರ್ಯ, ಧಾರ್ಮಿಕ ಕ್ಷೇತ್ರಗಳು ಹಾಗೂ ಕಡಲತೀರಗಳ...

ವಿದ್ಯಾಪೋಷಕ್ ವಿನಮ್ರ ಸಹಾಯ ವಿತರಣಾ ಸಮಾರಂಭ ಸಮಾರೋಪ

ಉಡುಪಿ, ಸೆ.28: ಯಕ್ಷಗಾನ ಕಲಾರಂಗ (ರಿ.), ಉಡುಪಿ ಇದರ ಅಂಗ ಸಂಸ್ಥೆಯಾದ...
error: Content is protected !!