Monday, January 20, 2025
Monday, January 20, 2025

ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು: ಅಶ್ವಥ ಟಿ ಮರಿಗೌಡ

ಕಾರ್ಮಿಕರು ಸರ್ಕಾರದ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು: ಅಶ್ವಥ ಟಿ ಮರಿಗೌಡ

Date:

ರಾಯಚೂರು, ಆ.5: ಬಹುತೇಕ ಕಾರ್ಮಿಕರು ಸರಕಾರ ಸೌಲಭ್ಯದಿಂದ ವಂಚಿತರಾಗಿದ್ದು ಸರಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಕಾರ್ಮಿಕರು ಸದ್ಬಳಕೆ ಮಾಡಿಕೊಳ್ಳಬೇಕೆಂದು ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಅಶ್ವಥ. ಟಿ ಮರಿಗೌಡ ಹೇಳಿದರು. ರಾಯಚೂರು ಜಿಲ್ಲೆಯಲ್ಲಿ ಸುಕೋ ಬ್ಯಾಂಕ್ ಎದುರುಗಡೆ ಎಲ್. ವಿ. ಡಿ. ಕಾಲೇಜ್ ರಸ್ತೆ ವಾಸವಿ ನಗರದಲ್ಲಿ ನೆರವು ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರ ಸಂಘಟನೆ ನೂತನ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಸೌಲಭ್ಯದಿಂದ ವಂಚಿತ ಕಾರ್ಮಿಕರನ್ನು ಗುರುತಿಸುವ ಕೆಲಸ ಸಂಘಟನೆ ಮಾಡುತ್ತದೆ. ಕಾರ್ಮಿಕರು ಸಂಘಟನೆ ಜೊತೆಗೆ ಕೈ ಜೋಡಿಸುವ ಮೂಲಕ ಕಾರ್ಮಿಕ ಕಾರ್ಡ್ ನಿಂದ ದೊರೆಯುವ ಮದುವೆ ಸಹಾಯಧನ, ಹೆರಿಗೆ ಸಹಾಯಧನ, ಶಿಷ್ಯವೇತನ, ಅಪಘಾತ ಪರಿಹಾರ ಸಹಾಯಧನ, ಶಸ್ತ್ರ ಚಿಕಿತ್ಸೆ ವೈದ್ಯಕೀಯ ಸಹಾಯ ಆರೋಗ್ಯ ಸೌಲಭ್ಯ, ಪಿಂಚಣಿ ಭಾಗ್ಯ ಇತ್ಯಾದಿ ಸೌಲಭ್ಯಗಳನ್ನು ಸದುಪಯೋಗ ಪಡೆದುಕೊಳ್ಳಬೇಕೆಂದು ಹೇಳಿದರು.

ತಾಲೂಕು ಅಧ್ಯಕ್ಷರನ್ನಾಗಿ ತಿಮಪ್ಪ, ಉಪಾಧ್ಯಕ್ಷರಾಗಿ ಈರಣ್ಣ, ಪ್ರಧಾನ ಕಾರ್ಯದರ್ಶಿಯನ್ನಾಗಿ ಸುನಿಲ ಕುಮಾರ ಅವರನ್ನು ಆಯ್ಕೆ ಮಾಡಲಾಯಿತು. ಸಂಘಟನೆ ರಾಜ್ಯ ಸಂಚಾಲಕರು ಪ್ರದೀಪ. ಕೆ. ಆರ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಾನಂದ ಬಿಡಿಕಿ, ವೆಂಕಟೇಶ, ಈರಪ್ಪ ವಲ್ಕಂದಿನ್ನಿ, ಸಚಿನ ಪವಾರ, ರವಿರಾಜ್, ಗೋಪಾಲ ದೊರೆ, ಚಂದ್ರಶೇಖರ, ಡಾ. ಶಿವು ರಾಠೋಡ ಮುಂತಾದ ಪದಾಧಿಕಾರಿಗಳು ಇದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!