Sunday, October 4, 2026
Sunday, October 4, 2026

ಕೋವಿಡ್-19: 23 ಸಾವಿರ ಕೋಟಿ ಪ್ಯಾಕೆಜ್ ಘೋಷಣೆ

ಕೋವಿಡ್-19: 23 ಸಾವಿರ ಕೋಟಿ ಪ್ಯಾಕೆಜ್ ಘೋಷಣೆ

Date:

ಕೊರೊನಾ ವಿರುದ್ಧದ ಹೋರಾಟವನ್ನು ಇನ್ನಷ್ಟು ಬಲಪಡಿಸುವ ನಿಟ್ಟಿನಲ್ಲಿ 23 ಸಾವಿರ ಕೋಟಿ ರೂಪಾಯಿಗಳ ಪ್ಯಾಕೇಜ್ ನ್ನು ಪ್ರಧಾನಿ ನರೇಂದ್ರ ಮೋದಿ ಘೋಷಣೆ ಮಾಡಿದ್ದಾರೆ. ಈ ಪ್ಯಾಕೆಜ್ ಅಡಿಯಲ್ಲಿ ದೇಶದ ಎಲ್ಲಾ ಜಿಲ್ಲೆಗಳಲ್ಲಿ ಐಸಿಯು ಹಾಸಿಗೆ, ಮಕ್ಕಳ ಆರೈಕೆ ಘಟಕಗಳು, ಆಮ್ಲಜನಕ ಸಂಗ್ರಹಣೆ, ಆಂಬ್ಯುಲೆನ್ಸ್‌, ಔಷಧಿಗಳಂತಹ ಅಗತ್ಯ ವ್ಯವಸ್ಥೆಗಳನ್ನು ಮಾಡಲಾಗುವುದು.

ಗುರುವಾರ ಸಚಿವ ಸಂಪುಟ ಪುನಾರಚನೆಯ ನಂತರ ಗುರುವಾರ ನಡೆದ ಮೊದಲ ಕ್ಯಾಬಿನೆಟ್ ಸಭೆಯಲ್ಲಿ 2021-22ರ ಆರ್ಥಿಕ ವರ್ಷಕ್ಕೆ 23,123 ಕೋಟಿ ರೂ.ಗಳ ಮೊತ್ತದ ಕೋವಿಡ್ -19 ತುರ್ತು ಕ್ರಮಕ್ಕಾಗಿ ಆರೋಗ್ಯ ವ್ಯವಸ್ಥೆಯ ಸಿದ್ಧತೆಗೆ ಎರಡನೆಯ ಹಂತದ ಪ್ಯಾಕೆಜ್ಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು. ಕ್ಯಾಬಿನೆಟ್ ಸಭೆಯಲ್ಲಿ ಕೃಷಿ ಮತ್ತು ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಪ್ರಧಾನಿ ಹೇಳಿದರು. ಮಂಡಿಗಳನ್ನು ಸಬಲೀಕರಣಗೊಳಿಸುವ ಸಲುವಾಗಿ ಕೃಷಿ ಮೂಲಸೌಕರ್ಯ ನಿಧಿಯ ಬಳಕೆಗೆ ಸಹ ವ್ಯವಸ್ಥೆ ಮಾಡಲಾಗಿದೆ ಎಂದು ಪ್ರಧಾನಿ ಹೇಳಿದರು.

ಕ್ಯಾಬಿನೆಟ್ ಸಭೆಯ ನಂತರ ಸುದ್ಧಿಗಾರರನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ, 23 ಸಾವಿರ ಕೋಟಿ ರೂಪಾಯಿಗಳ ಯೋಜನೆಯು ಆರೋಗ್ಯ ಮೂಲಸೌಕರ್ಯ ಅಭಿವೃದ್ಧಿಗೆ ಒತ್ತು ನೀಡಿ, ಆರಂಭಿಕ ಹಂತದಲ್ಲೇ ಸೋಂಕು ತಡೆಗಟ್ಟುವಿಕೆ, ಪತ್ತೆ ಮತ್ತು ನಿರ್ವಹಣೆಗೆ ತಕ್ಷಣದ ಕ್ರಮಕ್ಕಾಗಿ ಆರೋಗ್ಯ ವ್ಯವಸ್ಥೆಯ ಸನ್ನದ್ಧತೆಯನ್ನು ಚುರುಕುಗೊಳಿಸುವ ಉದ್ದೇಶವನ್ನು ಹೊಂದಿದೆ ಎಂದು ಹೇಳಿದರು.

ಜುಲೈ 1 ರಿಂದ 2022 ಮಾರ್ಚ್ 31 ರವರೆಗೆ ಹಂತ -2 ಅನ್ನು ಕೇಂದ್ರ ಮತ್ತು ರಾಜ್ಯಗಳ ಸಹಭಾಗಿತ್ವದೊಂದಿಗೆ ಜಾರಿಗೆ ತರಲಾಗುವುದು ಎಂದು ಅವರು ಹೇಳಿದರು. ಈ ಯೋಜನೆಗೆ ಕೇಂದ್ರದ ಪಾಲು 15 ಸಾವಿರ ಕೋಟಿ ರೂಪಾಯಿ
ಮತ್ತು ರಾಜ್ಯಗಳ ಪಾಲು 8,123 ಕೋಟಿ ರೂಪಾಯಿ ಎಂದು ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಹೇಳಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!