ಶ್ರೀನಗರ, ಮೇ.15: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೂವರು ಭಯೋತ್ಪಾದಕರನ್ನು ಸೇನೆ ಹೊಡೆದುರುಳಿಸಿದೆ. ಪೊಲೀಸರು ಮತ್ತು ಸೇನೆ ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ ನಂತರ ಗುರುವಾರ ಮುಂಜಾನೆ ಪ್ರಾರಂಭವಾದ ಭೀಕರ ಗುಂಡಿನ ಚಕಮಕಿಯಲ್ಲಿ ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ. ದಕ್ಷಿಣ ಕಾಶ್ಮೀರದ ಪುಲ್ವಾಮಾದ ಉಪ ಜಿಲ್ಲೆಯಾಗಿರುವ ಅವಂತಿಪೋರಾದ ನಾಡರ್ ಮತ್ತು ಟ್ರಾಲ್ ಪ್ರದೇಶದಲ್ಲಿ ಎನ್ಕೌಂಟರ್ ಪ್ರಾರಂಭವಾಯಿತು. 48 ಗಂಟೆಗಳ ಅವಧಿಯಲ್ಲಿ ಇದು ಎರಡನೇ ಎನ್ಕೌಂಟರ್ ಆಗಿದೆ.
“ಮೇ 13, 2025 ರಂದು, ಶೋಪಿಯಾನ್‌ನ ಶೂಕಲ್ ಕೆಲ್ಲರ್ ಪ್ರದೇಶದಲ್ಲಿ ಭಯೋತ್ಪಾದಕರ ಇರುವಿಕೆಯ ಬಗ್ಗೆ ರಾಷ್ಟ್ರೀಯ ರೈಫಲ್ಸ್ ಘಟಕದ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಭಾರತೀಯ ಸೇನೆಯು ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿ ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದೆ” ಎಂದು ಸೇನೆ ಎಕ್ಸ್ ನಲ್ಲಿ ಮಾಹಿತಿ ನೀಡಿದೆ.




By
ForthFocus™