Tuesday, October 15, 2024
Tuesday, October 15, 2024

2023-24ರಲ್ಲಿ ಅಂದಾಜು 3,322 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಉತ್ಪಾದನೆ

2023-24ರಲ್ಲಿ ಅಂದಾಜು 3,322 ಲಕ್ಷ ಮೆಟ್ರಿಕ್ ಟನ್ ಆಹಾರ ಧಾನ್ಯ ಉತ್ಪಾದನೆ

Date:

ನವದೆಹಲಿ, ಸೆ.25: 2023-24ರ ಅವಧಿಯಲ್ಲಿ ದೇಶದ ಒಟ್ಟು ಆಹಾರ ಧಾನ್ಯ ಉತ್ಪಾದನೆಯು 2022-23ಕ್ಕೆ ಹೋಲಿಸಿದರೆ ಮೂರು ಸಾವಿರದ 322 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ದಾಖಲೆಯ 26 ಲಕ್ಷ ಮೆಟ್ರಿಕ್ ಟನ್‌ಗಳಷ್ಟಿದೆ ಎಂದು ಅಂದಾಜಿಸಲಾಗಿದೆ. ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯವು 2023-24 ನೇ ಸಾಲಿನ ಪ್ರಮುಖ ಕೃಷಿ ಬೆಳೆಗಳ ಉತ್ಪಾದನೆಯ ಅಂತಿಮ ಅಂದಾಜುಗಳನ್ನು ಬಿಡುಗಡೆ ಮಾಡಿದೆ. ಅಕ್ಕಿ, ಗೋಧಿ ಮತ್ತು ಶ್ರೀಅನ್ನದ ಉತ್ತಮ ಉತ್ಪಾದನೆಯಿಂದಾಗಿ ಆಹಾರ ಧಾನ್ಯ ಉತ್ಪಾದನೆಯು ದಾಖಲೆಯ ಹೆಚ್ಚಳಕ್ಕೆ ಸಾಕ್ಷಿಯಾಗಿದೆ ಎಂದು ಸಚಿವಾಲಯ ತಿಳಿಸಿದೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಂದ ಪಡೆದ ಮಾಹಿತಿಯ ಆಧಾರದ ಮೇಲೆ ಈ ಅಂದಾಜುಗಳನ್ನು ಪ್ರಾಥಮಿಕವಾಗಿ ಸಿದ್ಧಪಡಿಸಲಾಗಿದೆ ಎಂದು ಅದು ಹೇಳಿದೆ. ಒಟ್ಟು ಅಕ್ಕಿ ಉತ್ಪಾದನೆಯು ದಾಖಲೆಯ ಒಂದು ಸಾವಿರದ 378 ಲಕ್ಷ ಮೆಟ್ರಿಕ್ ಟನ್‌ಗಳೆಂದು ಅಂದಾಜಿಸಲಾಗಿದೆ, ಇದು 2022-23 ಕ್ಕೆ ಹೋಲಿಸಿದರೆ ಸುಮಾರು 21 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಹೆಚ್ಚಾಗಿದೆ. ಗೋಧಿ ಉತ್ಪಾದನೆಯು ದಾಖಲೆಯ ಒಂದು ಸಾವಿರದ 132 ಲಕ್ಷ ಮೆಟ್ರಿಕ್ ಟನ್‌ಗಳು ಮತ್ತು ಶ್ರೀಅನ್ನ ಉತ್ಪಾದನೆಯು 175 ಲಕ್ಷ ಮೆಟ್ರಿಕ್ ಟನ್‌ಗಳೆಂದು ಅಂದಾಜಿಸಲಾಗಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಕೀರ್ತಿಶೇಷ ಲೋಕನಾಥ ಬೋಳಾರ್ ವೇಯ್ಟ್ ಲಿಫ್ಟಿಂಗ್ ತರಬೇತಿ ಕೇಂದ್ರ’ ಉದ್ಘಾಟನೆ

ವಿದ್ಯಾಗಿರಿ, ಅ.14: ‘ಕಠಿಣ ಪರಿಶ್ರಮ, ಶ್ರಮದಲ್ಲಿನ ಭಕ್ತಿ, ಸಮರ್ಪಣಾ ಭಾವ ಮತ್ತು...

ಮನೆಗಳ ಹಸ್ತಾಂತರ

ಬೆಂಗಳೂರು, ಅ.14: ರಾಜೀವ್ ಗಾಂಧಿ ವಸತಿ ನಿಗಮದಿಂದ 135 ಕೋಟಿ ರೂ....

ಕರಾವಳಿಯಲ್ಲಿ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಉಡುಪಿ, ಅ.14: ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 15 ರಿಂದ 17...

ಸೌತ್‌ ಝೋನ್‌ ಜೂನಿಯರ್‌ ಅತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ ಗೆ ಮಣಿಪಾಲ ಜ್ಞಾನಸುಧಾ ವಿದ್ಯಾರ್ಥಿ ಚಿರಾಗ್‌ ಸಿ ಪೂಜಾರಿ ಆಯ್ಕೆ

ಉಡುಪಿ, ಅ.14: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು, ವಿದ್ಯಾನಗರದ ಪ್ರಥಮ ವಿಜ್ಞಾನ...
error: Content is protected !!