Thursday, January 9, 2025
Thursday, January 9, 2025

ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಕನಿಷ್ಠ 4 ಮಂದಿ ಸಾವು, ಹಲವರಿಗೆ ಗಾಯ

ತಿರುಪತಿಯಲ್ಲಿ ಕಾಲ್ತುಳಿತಕ್ಕೆ ಕನಿಷ್ಠ 4 ಮಂದಿ ಸಾವು, ಹಲವರಿಗೆ ಗಾಯ

Date:

ಯು.ಬಿ.ಎನ್.ಡಿ., ಜ.8: ತಿರುಮಲ ಬೆಟ್ಟದ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ವೈಕುಂಠ ದ್ವಾರ ದರ್ಶನಕ್ಕಾಗಿ ಟಿಕೆಟ್ ಕೌಂಟರ್‌ಗಳಲ್ಲಿ ಬುಧವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಾಲ್ತುಳಿತದಲ್ಲಿ ಮೃತಪಟ್ಟವರ ಪೈಕಿ ಮೂವರು ಮಹಿಳೆಯರು ಸೇರಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ತೀವ್ರ ಆಘಾತವನ್ನು ವ್ಯಕ್ತಪಡಿಸಿದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಶ್ರೀವಾರಿ ವೈಕುಂಠ ದ್ವಾರಕ್ಕೆ ಭೇಟಿ ನೀಡಲು ಟೋಕನ್‌ಗಾಗಿ ತಿರುಪತಿಯ ವಿಷ್ಣು ನಿವಾಸದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಹಲವಾರು ಭಕ್ತರು ಸಾವನ್ನಪ್ಪಿರುವುದು ನನಗೆ ಆಘಾತವನ್ನುಂಟು ಮಾಡಿದೆ. ಟೋಕನ್‌ಗಾಗಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಜಮಾಯಿಸಿದ್ದ ಸಮಯದಲ್ಲಿ ದುರಂತ ಘಟನೆ ಸಂಭವಿಸಿದು ಬೇಸರದ ಸಂಗತಿ ಎಂದಿದ್ದಾರೆ. ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿದ ನಾಯ್ಡು, ಘಟನೆಯಲ್ಲಿ ಗಾಯಗೊಂಡವರಿಗೆ ನೀಡುತ್ತಿರುವ ಚಿಕಿತ್ಸೆ ಕುರಿತು ವಿಚಾರಿಸಿದರು. ಜನವರಿ 10 ರಿಂದ ಆರಂಭವಾಗುವ 10 ದಿನಗಳ ವೈಕುಂಠ ದ್ವಾರ ದರ್ಶನಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಜ್ಯಮಟ್ಟದ ಅರ್ಹತಾ ಪರೀಕ್ಷೆ (KSET): ಕೋಟೇಶ್ವರ ಸರ್ಕಾರಿ ಕಾಲೇಜಿನ ಮೂರು ವಿದ್ಯಾರ್ಥಿಗಳು ಉತ್ತೀರ್ಣ

ಕುಂದಾಪುರ, ಜ.8: ಶ್ರೀ ಕಾಳಾವರ ವರದರಾಜ ಎಂ ಶೆಟ್ಟಿ ಸರ್ಕಾರಿ ಪ್ರಥಮ...

ಅರ್ಚಕರಿಗೆ ಡಿಬಿಟಿ ಮೂಲಕ ತಸ್ತೀಕ್ ಪಾವತಿ: ಅರ್ಜಿ ಆಹ್ವಾನ

ಉಡುಪಿ, ಜ.8: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳ ಅರ್ಚಕರಿಗೆ...

ಜ.11: ಉಡುಪಿಯಲ್ಲಿ ಸಿರಿಧಾನ್ಯ ಹಬ್ಬ

ಉಡುಪಿ, ಜ.8: ಕೃಷಿ ಇಲಾಖೆ ವತಿಯಿಂದ ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ...

ಸಹಾಯಕ ತಾಂತ್ರಿಕ ವ್ಯವಸ್ಥಾಪಕರ ಹುದ್ದೆ: ಅರ್ಜಿ ಆಹ್ವಾನ

ಉಡುಪಿ, ಜ.8: ಕೃಷಿ ಇಲಾಖೆ ವತಿಯಿಂದ ಅನುಷ್ಠಾನಗೊಳಿಸುತ್ತಿರುವ ಆತ್ಮಯೋಜನೆಯಡಿ ನೇರಗುತ್ತಿಗೆ ಆಧಾರದಲ್ಲಿ...
error: Content is protected !!