ನವದೆಹಲಿ, ಮೇ 14: ನ್ಯಾಯಮೂರ್ತಿ ಭೂಷಣ್ ರಾಮಕೃಷ್ಣ ಗವಾಯಿ ಅವರು ಬುಧವಾರ ಭಾರತದ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಆಗಿ ಪ್ರಮಾಣ ವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು. ನವೆಂಬರ್ 23, 2025 ರವರೆಗೆ ಅಧಿಕಾರದಲ್ಲಿ ಇರಲಿರುವ ಅವರು ಭಾರತದ 52 ನೇ ಮುಖ್ಯ ನ್ಯಾಯಮೂರ್ತಿ.

ಮಹಾರಾಷ್ಟ್ರದ ಅಮರಾವತಿಯಲ್ಲಿ ನವೆಂಬರ್ 24, 1960 ರಂದು ಜನಿಸಿದ ನ್ಯಾಯಮೂರ್ತಿ ಗವಾಯಿ ಅವರು ನವೆಂಬರ್ 14, 2003 ರಂದು ಬಾಂಬೆ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಾಧೀಶರಾಗಿ ಬಡ್ತಿ ಪಡೆದರು. ಅವರು ನವೆಂಬರ್ 12, 2005 ರಂದು ಹೈಕೋರ್ಟ್‌ನ ಖಾಯಂ ನ್ಯಾಯಾಧೀಶರಾದರು.

ಬುಧವಾರ ನಡೆದ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಉಪರಾಷ್ಟ್ರಪತಿ ಜಗದೀಪ್ ಧಂಖರ್, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಸಮಾರಂಭದಲ್ಲಿ ಭಾಗವಹಿಸಿದ್ದರು. ಮಾಜಿ ಸಿಜೆಐ ಖನ್ನಾ, ಸುಪ್ರೀಂ ಕೋರ್ಟ್ ನ್ಯಾಯಾಧೀಶರಾದ ಸೂರ್ಯಕಾಂತ್, ಬೇಲಾ ತ್ರಿವೇದಿ, ಪಿ ಎಸ್ ನರಸಿಂಹ ಮುಂತಾದವರು ಉಪಸ್ಥಿತರಿದ್ದರು.




By
ForthFocus™