ಹೂಗ್ಲಿ, ಮೇ 15: ಬಿಜೆಪಿ ಸರ್ಕಾರವು ಪಾಕ್ ಆಕ್ರಮಿತ ಕಾಶ್ಮೀರವನ್ನು (ಪಿಒಕೆ) ಹಿಂಪಡೆಯಲು ಬದ್ಧವಾಗಿದೆ ಮತ್ತು ಇದನ್ನು ಪಾಕಿಸ್ತಾನದಿಂದ ತಡೆಯಲು ಸಾಧ್ಯವಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಪಶ್ಚಿಮ ಬಂಗಾಳದ ಹೂಗ್ಲಿಯಲ್ಲಿ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಅವರು, ಪಿಒಜೆಕೆ ಜನರು ಪಾಕಿಸ್ತಾನದಿಂದ ಸ್ವಾತಂತ್ರ್ಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳು ಗರಿಗೆದರಿದ ಕಾರಣ ಎರಡು ಕೋಟಿ ಪ್ರವಾಸಿಗರು ಕಾಶ್ಮೀರಕ್ಕೆ ಬಂದು ಹೊಸ ದಾಖಲೆಯನ್ನು ಸೃಷ್ಟಿಸಿದ್ದಾರೆ. ಆರ್ಟಿಕಲ್ 370 ರದ್ದತಿ ಬಗ್ಗೆ ಮಾತನಾಡಿದ ಅಮಿತ್ ಶಾ, ಮಮತಾ ದೀದಿ, ಕಾಂಗ್ರೆಸ್, 370 ನೇ ವಿಧಿಯನ್ನು ತೆಗೆದುಹಾಕಬೇಡಿ ಎಂದು ಕೇಳುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಆರ್ಟಿಕಲ್ 370 ಅನ್ನು ರದ್ದುಗೊಳಿಸಿದರು ಮತ್ತು ಕಾಶ್ಮೀರವನ್ನು ಭಾರತದ ಉಳಿದ ಭಾಗಗಳಿಗೆ ವಿಲೀನಗೊಳಿಸಿದರು. ಪಶ್ಚಿಮ ಬಂಗಾಳದ ಪ್ರಸ್ತುತ ಆಡಳಿತ ಪಕ್ಷವು ಬಾಂಗ್ಲಾದೇಶದಿಂದ ನುಸುಳುಕೋರರನ್ನು ಮತಬ್ಯಾಂಕ್ ಆಗಿ ಬಳಸುತ್ತಿದೆ. ಬಾಂಗ್ಲಾದೇಶದ ಹಿಂದೂಗಳು, ಬೌದ್ಧರು, ಜೈನರು ಮತ್ತು ಸಿಖ್ಖರಿಗೆ ಸಿಎಎ ಅಡಿಯಲ್ಲಿ ಪೌರತ್ವ ನೀಡಲಾಗುವುದು ಎಂದು ಅಮಿತ್ ಶಾ ಹೇಳಿದರು.
ಪಾಕ್ ಆಕ್ರಮಿತ ಕಾಶ್ಮೀರ ಹಿಂಪಡೆಯಲು ಬಿಜೆಪಿ ಸರ್ಕಾರ ಬದ್ಧವಾಗಿದೆ: ಗೃಹ ಸಚಿವ ಅಮಿತ್ ಶಾ
ಪಾಕ್ ಆಕ್ರಮಿತ ಕಾಶ್ಮೀರ ಹಿಂಪಡೆಯಲು ಬಿಜೆಪಿ ಸರ್ಕಾರ ಬದ್ಧವಾಗಿದೆ: ಗೃಹ ಸಚಿವ ಅಮಿತ್ ಶಾ
Date: