Friday, July 24, 2026
Friday, July 24, 2026

ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ಗೆಲುವಿನತ್ತ ಬಿಜೆಪಿ; ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುನ್ನಡೆ; ಅಸ್ಸಾಂನಲ್ಲಿ ಮತ್ತೊಮ್ಮೆ ಅರಳಲಿದೆ ಕಮಲ; ತಮಿಳುನಾಡಿನಲ್ಲಿ ಧೂಳೆಬ್ಬಿಸಿದ ವಿಜಯ್

ಪಶ್ಚಿಮ ಬಂಗಾಳದಲ್ಲಿ ಐತಿಹಾಸಿಕ ಗೆಲುವಿನತ್ತ ಬಿಜೆಪಿ; ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಮುನ್ನಡೆ; ಅಸ್ಸಾಂನಲ್ಲಿ ಮತ್ತೊಮ್ಮೆ ಅರಳಲಿದೆ ಕಮಲ; ತಮಿಳುನಾಡಿನಲ್ಲಿ ಧೂಳೆಬ್ಬಿಸಿದ ವಿಜಯ್

Date:

ನವದೆಹಲಿ, ಮೇ 4: ಪಶ್ಚಿಮ ಬಂಗಾಳ, ಕೇರಳ, ಅಸ್ಸಾಂ, ತಮಿಳುನಾಡು ಮತ್ತು ಪುದುಚೇರಿ ಮತ ಎಣಿಕೆ ಪ್ರಾರಂಭವಾಗಿದೆ. ತಮಿಳುನಾಡಿನಲ್ಲಿ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ ಹಲವಾರು ವಿಭಾಗಗಳಲ್ಲಿ ಡಿಎಂಕೆ ಮತ್ತು ಎಐಎಡಿಎಂಕೆ ಎರಡನ್ನೂ ಹಿಂದಿಕ್ಕಿ ಮುನ್ನಡೆ ಸಾಧಿಸಿದೆ. ಕೇರಳದಲ್ಲಿ, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ ಅಧಿಕಾರಕ್ಕೆ ಮರಳಲಿದೆ, ಏತನ್ಮಧ್ಯೆ, ಪಶ್ಚಿಮ ಬಂಗಾಳವು ಐತಿಹಾಸಿಕ ಬದಲಾವಣೆಯತ್ತ ಸಾಗುತ್ತಿದೆ, ಬಿಜೆಪಿ ಟಿಎಂಸಿಗಿಂತ ಮುಂದಿದೆ ಮತ್ತು ರಾಜ್ಯದಲ್ಲಿ ತನ್ನ ಮೊದಲ ಸರ್ಕಾರವನ್ನು ರಚಿಸುವ ಹಾದಿಯಲ್ಲಿದೆ. ಅಸ್ಸಾಂನಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರುವ ಎಲ್ಲಾ ಲಕ್ಷಣಗಳಿವೆ.

ಕೇರಳದಲ್ಲಿ ಒಟ್ಟು 140 ಸ್ಥಾನಗಳಲ್ಲಿ ಬಹುಮತಕ್ಕೆ 71 ಅವಶ್ಯವಿದ್ದು, ಎಲ್.ಡಿ.ಎಫ್ 35, ಯು.ಡಿಎಫ್ 90, ಎನ್.ಡಿ.ಎ 2 ಮತ್ತು ಇತರರರು 13 ಸ್ಥಾನಗಳಲ್ಲಿ ಮುನ್ನಡೆ ಪಡೆದಿದ್ದಾರೆ. ಅಸ್ಸಾಂನಲ್ಲಿ 126 ಸ್ಥಾನಗಳಲ್ಲಿ ಬಹುಮತ ಪಡೆಯಲು 64 ಸ್ಥಾನಗಳ ಅಗತ್ಯವಿದ್ದು ಬಿಜೆಪಿ+ 99, ಕಾಂಗ್ರೆಸ್ + 23 ಇತರರು 4 ಸ್ಥಾನಗಳಲ್ಲಿ ಮುನ್ನಡೆ ಪಡೆದಿದ್ದಾರೆ. ಪುದುಚೇರಿಯಲ್ಲಿ 30 ಸ್ಥಾನಗಳಲ್ಲಿ ಬಹುಮತ ಸಾಧಿಸಲು 16 ಅಗತ್ಯವಿದ್ದು ಬಿಜೆಪಿ+ 16, ಕಾಂಗ್ರೆಸ್+ 10, ಇತರರು 3 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ಪಶ್ಚಿಮ ಬಂಗಾಳಲ್ಲಿ 294 ಸ್ಥಾನಗಳಲ್ಲಿ ಅಧಿಕಾರ ಪಡೆಯಲು 148 ಸಂಖ್ಯಾಬಲ ಅಗತ್ಯವಿದ್ದು ಬಿಜೆಪಿ 195, ಟಿಎಂಸಿ 93 ಮತ್ತು ಇತರರು 2 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. ತಮಿಳುನಾಡಿನಲ್ಲಿ 234 ಸ್ಥಾನಗಳಲ್ಲಿ ಅಧಿಕಾರ ಪಡೆಯಲು 118 ಅಗತ್ಯವಿದ್ದು, ಡಿಎಂಕೆ 60, ಎಐಡಿಎಂಕೆ 63, ಟಿವಿಕೆ 109 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತ್ರಿಶಾ ವಿದ್ಯಾ ಕಾಲೇಜು: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ

ಕಟಪಾಡಿ, ಜು.23: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್ ಅಂಡ್...

ಶೈಕ್ಷಣಿಕ ಬದುಕಿನ ಅರ್ಥವನ್ನು ಅರಿತುಕೊಳ್ಳಿ: ವಿದ್ಯಾರ್ಥಿಗಳಿಗೆ ಡಾ. ಕೆ. ಉಮೇಶ್ ಶೆಟ್ಟಿ ಕರೆ

ಕುಂದಾಪುರ, ಜು.23: ವಿದ್ಯಾರ್ಥಿಗಳು ಪಠ್ಯಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಮೂಲಕ ಧನಾತ್ಮಕವಾಗಿ ಚಿಂತಿಸಿ,...

ಕಟ್ಟಡ ಕಾಮಗಾರಿ ಕೆಲಸ ನಿರ್ವಹಿಸುತ್ತಿದ್ದ ಬಾಲ ಕಾರ್ಮಿಕನ ರಕ್ಷಣೆ

ಉಡುಪಿ, ಜು.23: ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರ್ ಗ್ರಾಮದಲ್ಲಿ ನಡೆಯುತ್ತಿರುವ ಕಟ್ಟಡ...
error: Content is protected !!