ಮುಂಬಯಿ: ಮಹಾರಾಷ್ಟ್ರದ ಪಾಲ್ಘರ್ನಲ್ಲಿ ಸೂರ್ಯ ನದಿಯ ಸೇತುವೆಯ ಮೇಲೆ ಇಂದು ನಡೆದ ಅಪಘಾತದಲ್ಲಿ ಟಾಟಾ ಸನ್ಸ್ ನ ಮಾಜಿ ಅಧ್ಯಕ್ಷ ಸೈರಸ್ ಮಿಸ್ತ್ರಿ ಸಾವನ್ನಪ್ಪಿದ್ದಾರೆ. ಅವರಿಗೆ 54 ವರ್ಷ ವಯಸ್ಸಾಗಿತ್ತು.
ಅಹಮದಾಬಾದ್ನಿಂದ ಮುಂಬೈಗೆ ಪ್ರಯಾಣಿಸುತ್ತಿದ್ದಾಗ ಅವರ ಕಾರು ಡಿವೈಡರ್ಗೆ ಡಿಕ್ಕಿ ಹೊಡೆದು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಕಾರು ಚಾಲಕ ಸೇರಿದಂತೆ ಅವರೊಂದಿಗೆ ಪ್ರಯಾಣಿಸುತ್ತಿದ್ದ ಇನ್ನಿಬ್ಬರು ಗಾಯಗೊಂಡಿದ್ದಾರೆ. ಮಿಸ್ತ್ರಿ ಅವರಿದ್ದ ಕಾರು ಅತಿವೇಗದಲ್ಲಿದ್ದ ಕಾರಣ ನಿಯಂತ್ರಣ ಕಳೆದುಕೊಂಡು ಅವಘಡ ಸಂಭವಿಸಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.
2012 ರಿಂದ 2016 ರವರೆಗೆ ಟಾಟಾ ಸನ್ಸ್ ಅಧ್ಯಕ್ಷರಾಗಿ ಅವರು ಕಾರ್ಯನಿರ್ವಹಿಸಿದ್ದರು. ಮಿಸ್ತ್ರಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ.