Friday, January 24, 2025
Friday, January 24, 2025

ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ

ಬಿಜೆಪಿ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ

Date:

ನವದೆಹಲಿ, ಫೆ.3: ಬಿಜೆಪಿಯ ಹಿರಿಯ ನಾಯಕ ಎಲ್‌ಕೆ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಶನಿವಾರ ಘೋಷಿಸಿದ್ದಾರೆ. ಈ ಕುರಿತು ತಮ್ಮ ಎಕ್ಸ್ ಖಾತೆಯಲ್ಲಿ ಮಾಹಿತಿ ನೀಡಿದ ಪ್ರಧಾನಿ, ‘ಎಲ್ ಕೆ ಅಡ್ವಾಣಿ ಅವರಿಗೆ ಭಾರತ ರತ್ನ ನೀಡಲಾಗುವುದು ಎಂಬ ಮಾಹಿತಿ ಹಂಚಿಕೊಳ್ಳಲು ನನಗೆ ತುಂಬಾ ಸಂತೋಷವಾಗಿದೆ. ನಾನು ಕೂಡ ಅವರೊಂದಿಗೆ ಮಾತನಾಡಿ ಈ ಗೌರವಕ್ಕೆ ಪಾತ್ರರಾಗಿದ್ದಕ್ಕೆ ಅಭಿನಂದಿಸಿದ್ದೇನೆ. ನಮ್ಮ ಕಾಲದ ಅತ್ಯಂತ ಗೌರವಾನ್ವಿತ ರಾಜಕಾರಣಿಗಳಲ್ಲಿ ಅವರು ಒಬ್ಬರು, ಭಾರತದ ಅಭಿವೃದ್ಧಿಗೆ ಅವರ ಕೊಡುಗೆ ಮಹತ್ವದ್ದಾಗಿದೆ. ತಳಮಟ್ಟದಲ್ಲಿ ಕೆಲಸ ಮಾಡುವುದರಿಂದ ಹಿಡಿದು ನಮ್ಮ ಉಪಪ್ರಧಾನಿಯಾಗಿ ದೇಶಸೇವೆ ಮಾಡುವವರೆಗಿನ ಜೀವನ ಅವರದು. ಅವರ ಸಂಸದೀಯ ಜೀವನಶೈಲಿ ಆದರ್ಶಪ್ರಾಯವಾಗಿವೆ’ ಎಂದರು.

ನವೆಂಬರ್ 8, 1927 ರಂದು ಕರಾಚಿಯಲ್ಲಿ (ಅಂದು ಭಾರತದ ಭಾಗವಾಗಿತ್ತು) ಜನಿಸಿದ ಅವರು, 1936 -1942 ಕರಾಚಿಯ ಸೇಂಟ್ ಪ್ಯಾಟ್ರಿಕ್ಸ್ ಶಾಲೆಯಲ್ಲಿ ಓದಿದರು, ಮೆಟ್ರಿಕ್ಯುಲೇಷನ್ ವರೆಗೆ ತರಗತಿಯಲ್ಲಿ ಪ್ರಥಮ ಸ್ಥಾನ ಪಡೆದರು. 1942 ರಂದು ಸ್ವಯಂಸೇವಕರಾಗಿ ಆರ್‌ಎಸ್‌ಎಸ್‌ ಸೇರಿದರು. 1958-63 ರಲ್ಲಿ ದೆಹಲಿ ರಾಜ್ಯ ಜನಸಂಘದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದರು. 1960-1967 ರಲ್ಲಿ ಜನಸಂಘದ ರಾಜಕೀಯ ಪತ್ರಿಕೆಯಾದ ಆರ್ಗನೈಸರ್‌ಗೆ ಸಹಾಯಕ ಸಂಪಾದಕರಾಗಿ ಸೇರಿದರು. ಏಪ್ರಿಲ್ 1970 ರಾಜ್ಯಸಭೆಗೆ ಪ್ರವೇಶಿಸಿದ ಅವರು, ಡಿಸೆಂಬರ್ 1972 ರಂದು ಭಾರತೀಯ ಜನಸಂಘದ ಅಧ್ಯಕ್ಷರಾಗಿ ಆಯ್ಕೆಯಾದರು. 26 ಜೂನ್ 1975 ತುರ್ತು ಪರಿಸ್ಥಿತಿಯ ಅವಧಿಯಲ್ಲಿ ಬೆಂಗಳೂರಿನಲ್ಲಿ ಆಡ್ವಾಣಿಯವರನ್ನು ಬಂಧಿಸಲಾಯಿತು ಮತ್ತು ಇತರ ಜನಸಂಘದ ಸದಸ್ಯರೊಂದಿಗೆ ಬೆಂಗಳೂರು ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು. ಮಾರ್ಚ್ 1977 ರಿಂದ ಜುಲೈ 1979 ರವರೆಗೆ ಕೇಂದ್ರ ಸಚಿವರಾಗಿದ್ದರು. ಮೇ 1986 ರಂದು ಭಾರತೀಯ ಜನತಾ ಪಕ್ಷದ (ಬಿಜೆಪಿ) ಅಧ್ಯಕ್ಷರಾದರು. 1988 ಬಿಜೆಪಿ ಸರ್ಕಾರದಲ್ಲಿ ಗೃಹ ಸಚಿವರಾದರು. 1990 ಸಂದರ್ಭದಲ್ಲಿ ಸೋಮನಾಥದಿಂದ ಅಯೋಧ್ಯೆಗೆ ರಾಮ ರಥ ಯಾತ್ರೆಯನ್ನು ಆರಂಭಿಸಿದರು. 1997 ಸಂದರ್ಭದಲ್ಲಿ ಭಾರತದ ಸ್ವಾತಂತ್ರ್ಯದ ಸುವರ್ಣ ಮಹೋತ್ಸವವನ್ನು ಆಚರಿಸಲು ಸ್ವರ್ಣ ಜಯಂತಿ ರಥಯಾತ್ರೆಯನ್ನು ಪ್ರಾರಂಭಿಸಿದರು. ಅಕ್ಟೋಬರ್ 1999 – ಮೇ 2004 ರವರೆಗೆ ಕೇಂದ್ರ ಗೃಹ ಸಚಿವರಾಗಿ, ಜೂನ್ 2002 – ಮೇ 2004 ರವರೆಗೆ ಉಪ ಪ್ರಧಾನಮಂತ್ರಿಯಾಗಿ ಅಡ್ವಾಣಿ ಸೇವೆ ಸಲ್ಲಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿಮಗೆ ಪ್ಯಾಷನ್ ಇದೆಯೇ?

ಸುಬ್ಬನಿಗೆ ಗಾಯಕನಾಗುವ ಆಸೆ. ಸುಬ್ಬಿಗೆ ನರ್ತಕಿಯಾಗುವ ಆಸೆ. ಆದರೆ ಇಬ್ಬರಲ್ಲಿ ವ್ಯತ್ಯಾಸವಿದೆ....

ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಾಗಾರ

ಉಡುಪಿ, ಜ.23: ಪ್ರವಾಸೋದ್ಯಮ ಇಲಾಖೆ ವತಿಯಿಂದ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ...
error: Content is protected !!